ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಶುಭ್ಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಕೆಎಲ್ ರಾಹುಲ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಆಡಲಿದ್ದಾರೆ.
ಟೆಸ್ಟ್ ತಂಡಕ್ಕೆ ಸಿರಾಜ್, ನಿತೀಶ್ ಕುಮಾರ್ ರೆಡ್ಡಿ ಮರಳಿದ್ದಾರೆ. ಕನ್ನಡಿಗ ದೇವದತ್ ಪಡಿಕ್ಕಲ್ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ.
ಏಕದಿನ ಸರಣಿಗೆ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಪ್ರಿನ್ಸ್ ಯಾದವ್ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದ್ದು, ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿರುವುದರಿಂದ ತಂಡದ ಆಡಳಿತ ಮಂಡಳಿ ಅವರಿಗೆ ಅವಕಾಶ ನೀಡಿದೆ. ರಿಷಭ್ ಪಂತ್ ಅವರನ್ನು ಕೈಬಿಡಲಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಕೂಡ ಏಕದಿನ ತಂಡದಲ್ಲಿ ಮುಂದುವರಿಸಲಾಗಿದೆ.
ಏಕದಿನ ತಂಡದಲ್ಲೂ ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆಗೆ ಅವಕಾಶ ನೀಡಲಾಗಿದೆ. ಜಡೇಜಾರನ್ನ ಎರಡೂ ತಂಡಗಳಿಂದ ಕೈಬಿಡಲಾಗಿದೆ.
ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್, ಹರ್ಷ್ ದುಬೆ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಹರ್ಷ್ ದುಬೆ
ಇಶಾನ್ ಕಿಶನ್ ಮಾತ್ರವಲ್ಲದೆ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ತಂಡಕ್ಕೆ ಮರಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಸರಣಿಗೆ ಪಾಂಡ್ಯ ಅವರನ್ನು ಆಯ್ಕೆ ಮಾಡಿರಲಿಲ್ಲ. ಆ ಸಮಯದಲ್ಲಿ, ಆಯ್ಕೆದಾರರು ಅವರು 10 ಓವರ್ಗಳ ಪೂರ್ಣ ಕೋಟಾ ಬೌಲಿಂಗ್ ಮಾಡುವಷ್ಟು ಫಿಟ್ ಆಗಿದ್ದಾರೆ ಎಂದು ನಂಬಿರಲಿಲ್ಲ. ಆದಾಗ್ಯೂ, 2026 ರ ಐಪಿಎಲ್ ಋತುವಿನಲ್ಲಿಯೂ ಅವರು ಗಾಯದಿಂದ ಬಳಲುತ್ತಿದ್ದಾರೆ. ಗಾಯದಿಂದಾಗಿ ಅವರು ಕಳೆದ ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಆದರೂ ಅವರಿಗೆ ಏಕದಿನ ತಂಡದಲ್ಲಿ ಅವಕಾಶ ನೀಡಲಾಗಿದೆ.












