Indian Railway: ಬೆಂಗಳೂರಿಂದ ಕರಾವಳಿ ಪ್ರವಾಸಕ್ಕೆ ಡಬಲ್‌ ಧಮಾಕಾ; ವಂದೇ ಭಾರತ್‌ ವಿಸ್ತರಣೆ, ರವಿವಾರದ ರಜೆ ಮುಗಿಸಿ ವಾಪಾಸ್ ಬರೋರಿಗೆ ಗುಡ್‌ ನ್ಯೂಸ್! | ಉತ್ತರ ಕನ್ನಡ ನ್ಯೂಸ್ (Uttara Kannada News) | ACTPnews

Indian Railway: ಬೆಂಗಳೂರಿಂದ ಕರಾವಳಿ ಪ್ರವಾಸಕ್ಕೆ ಡಬಲ್‌ ಧಮಾಕಾ; ವಂದೇ ಭಾರತ್‌ ವಿಸ್ತರಣೆ, ರವಿವಾರದ ರಜೆ ಮುಗಿಸಿ ವಾಪಾಸ್ ಬರೋರಿಗೆ ಗುಡ್‌ ನ್ಯೂಸ್! | ಉತ್ತರ ಕನ್ನಡ ನ್ಯೂಸ್ (Uttara Kannada News)


ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮನವಿಗೆ ಸ್ಪಂದನೆ

ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ ಎಂದು ಕಾಗೇರಿ ತಿಳಿಸಿದ್ದಾರೆ. ಬೆಂಗಳೂರು ಮತ್ತು ಮಡಗಾಂವ್ ನಡುವೆ ಹೊಸ ವಂದೇ ಭಾರತ್ ರೈಲು ಆರಂಭಿಸುವಂತೆ ಮಾರ್ಚ್‌ 11ರಂದು ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದಾಗಿ ಅವರು ಹೇಳಿದ್ದಾರೆ. ಆ ಮನವಿಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ, ಮಡಗಾಂವ್–ಮಂಗಳೂರು ವಂದೇ ಭಾರತ್ ರೈಲನ್ನು ಮುರ್ಡೇಶ್ವರ, ಗೋಕರ್ಣ ಮತ್ತು ಕಾರವಾರ ಮಾರ್ಗವಾಗಿ ಬೆಂಗಳೂರಿನವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ಸಂಸದರು ತಿಳಿಸಿದ್ದಾರೆ.

ತೀರ್ಥಕ್ಷೇತ್ರಗಳ ದರ್ಶನಕ್ಕೆ ಹೇಳಿ ಮಾಡಿಸಿದ ಆಯ್ಕೆ

ಪರಿಷ್ಕೃತ ಸಮಯದೊಂದಿಗೆ ಈ ರೈಲು ರೈಲು ಸಂಖ್ಯೆ 26655/26656 ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿ ಸಂಚರಿಸಲಿದೆ. ಈ ವಿಸ್ತರಣೆಯಿಂದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕನ್ನಡ ಭಾಗದ ಪ್ರಯಾಣಿಕರಿಗೆ ಅನುಕೂಲವಾಗುವುದರ ಜತೆಗೆ ತೀರ್ಥಕ್ಷೇತ್ರಗಳಿಗೆ ತೆರಳುವ ಭಕ್ತರು ಮತ್ತು ಪ್ರವಾಸಿಗರಿಗೂ ಸಂಪರ್ಕ ಸುಲಭವಾಗಲಿದೆ ಎಂದು ಕಾಗೇರಿ ಹೇಳಿದ್ದಾರೆ. ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಸಮಸ್ತ ಕ್ಷೇತ್ರದ ಜನರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

ಮತ್ತೊಂದು ವಿಶೇಷ ರೈಲಿನ ಸೇರ್ಪಡೆ

ಇದರ ನಡುವೆ ವಾರಾಂತ್ಯದ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನೂ ಓಡಿಸಲಿದೆ. ರೈಲು ಸಂಖ್ಯೆ 06597 ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು 2026ರ ಅಕ್ಟೋಬರ್ 1ರಂದು ಗುರುವಾರ ರಾತ್ರಿ 11:50ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಡಲಿದೆ. ಈ ರೈಲು ಅಕ್ಟೋಬರ್ 2ರಂದು ಶುಕ್ರವಾರ ಸಂಜೆ 6:10ಕ್ಕೆ ಮಡಗಾಂವ್ ತಲುಪಲಿದೆ.
ಮರು ಪ್ರಯಾಣ ಯಾವಾಗ?

ಮರುಪ್ರಯಾಣದಲ್ಲಿ ರೈಲು ಸಂಖ್ಯೆ 06598 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 4ರಂದು ಭಾನುವಾರ ಬೆಳಗ್ಗೆ 8:40ಕ್ಕೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11:55ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ವಾರಾಂತ್ಯದ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡೇ ಈ ವಿಶೇಷ ಸೇವೆಯನ್ನು ಘೋಷಿಸಲಾಗಿದೆ.

ಎಲ್ಲೆಲ್ಲಿ ನಿಲುಗಡೆ?

ಎರಡೂ ಮಾರ್ಗಗಳಲ್ಲಿ ವಿಶೇಷ ರೈಲು ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕನಕೋನ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಬೋಗಿಗಳ ವಿವರ

ಇದನ್ನೂ ಓದಿ: Karnataka Dams: ಕೆ.ಆರ್.ಎಸ್, ಹೇಮಾವತಿ ಡ್ಯಾಮ್ ನೀರಿನ ಮಟ್ಟ ಏರಿಳಿತ, ಜಲಾಶಯಗಳ ಅಸಲಿ ಸ್ಥಿತಿ ಇದು!

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 07 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳಿದ್ದು, ದಿವ್ಯಾಂಗ ಸ್ನೇಹಿ ಬೋಗಿಯನ್ನು ಒಳಗೊಂಡ 02 ಲಗೇಜ್ ಮತ್ತು ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ. ಈ ಮಾಹಿತಿಯನ್ನು ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ತಿಳಿಸಿದ್ದಾರೆ. ಒಂದೆಡೆ ಬೆಂಗಳೂರು–ಮಡಗಾಂವ್ ವಂದೇ ಭಾರತ್ ಸಂಪರ್ಕವನ್ನು ವಿಸ್ತರಿಸುವ ನಿರ್ಧಾರ ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ರಾಜಧಾನಿ ಸಂಪರ್ಕಕ್ಕೆ ಮಹತ್ವದ ಬದಲಾವಣೆಯಾಗಿದ್ದರೆ, ಮತ್ತೊಂದೆಡೆ ಅಕ್ಟೋಬರ್ 1 ಮತ್ತು ಅಕ್ಟೋಬರ್ 4ರಂದು ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ವಾರಾಂತ್ಯದ ಹೆಚ್ಚುವರಿ ಪ್ರಯಾಣಿಕರಿಗೆ ಮತ್ತೊಂದು ಆಯ್ಕೆಯಾಗಲಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports