Last Updated:
ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ದುರಂತ ತಪ್ಪಿದಂತಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಿಂದ (Delhi) ಚೆನ್ನೈಗೆ (Chennai) ತೆರಳುತ್ತಿದ್ದ ಇಂಡಿಗೋ (IndiGo) ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ (Power Bank) ನಿಂದ ಈ ಅಗ್ನಿ (Fire) ಅವಘಡ ಸಂಭವಿಸಿದ್ದು, ದೊಡ್ಡ ದುರಂತ ತಪ್ಪಿದಂತಾಗಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ, ತಕ್ಷಣವೇ ಎಚ್ಚತ್ತ ವಿಮಾನ ಸಿಬ್ಬಂದಿ ಹೈದರಾಬಾದ್ನಲ್ಲಿ ಲ್ಯಾಂಡ್ ಮಾಡಿದ್ದಾರೆ.
ಇಂಡಿಗೋ ವಿಮಾನ 6E 6115ದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್ ಅನ್ನು ಲಗೇಜ್ ಕಂಪಾರ್ಟ್ಮೆಂಟ್ನಲ್ಲಿ ಇರಿಸಿದ್ದರು. ಆದ್ರೆ, ವಿಮಾನ ಟೇಕ್ ಆಫ್ ಆಕಾಶದಲ್ಲಿ ಹಾರುತ್ತಿರುವಾಗಲೇ ಪವರ್ ಬ್ಯಾಂಕ್ ಸ್ಫೋಟಗೊಂಡಿದ್ದು, ಬೆಂಕಿ ಹೊತ್ತಿ ಉರಿಯಲು ಆರಂಭಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಕ್ಯಾಬಿನ್ ಸಿಬ್ಬಂದಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ನಿಗದಿತ ಸುರಕ್ಷತಾ ಶಿಷ್ಟಾಚಾರಗಳ ಪ್ರಕಾರ ಪೈಲಟ್‌ಗಳು ವಿಮಾನವನ್ನು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ತಿರುಗಿಸಿದ್ದು, ಅಲ್ಲಿ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ.
ಇದನ್ನೂ ಓದಿ: Sad News: ಜಾಮ್‌ನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಇಬ್ಬರು ಸಾವು
ಇನ್ನು, ಪ್ರಯಾಣಿಕರನ್ನು ಚೆನ್ನೈಗೆ ತಲುಪಿಸಲು ಮತ್ತೊಂದು ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರಿಗೆ ಉಪಹಾರವನ್ನು ನೀಡಲಾಗುತ್ತಿದೆ ಮತ್ತು ಕಾಲಕಾಲಕ್ಕೆ ಅಗತ್ಯ ಮಾಹಿತಿಗಳನ್ನು ಒದಗಿಸಲಾಗುತ್ತಿದೆ. ಈ ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಇಂಡಿಗೋ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ತಮ್ಮ ಸರ್ವೋಚ್ಚ ಆದ್ಯತೆಯಾಗಿದೆ ಎಂದು ಏರ್‌ಲೈನ್ಸ್ ತಿಳಿಸಿದೆ.














