Indira Canteen: ಬೆಂಗಳೂರಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಇನ್ಮುಂದೆ ಕಡಿಮೆ ದರದಲ್ಲಿ ಸಿಗಲಿದೆ ಊಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews

ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್


Last Updated:

ಬೆಂಗಳೂರು ವಿದ್ಯಾರ್ಥಿಗಳಿಗೆ ಕಡಿಮೆ ದರದ ಪೌಷ್ಟಿಕ ಆಹಾರಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಯೋಜನೆ, ಮೊದಲ ಹಂತದಲ್ಲಿ ಎರಡು ಕಾಲೇಜುಗಳಲ್ಲಿ ಆರಂಭ, ನಂತರ ರಾಜ್ಯದ ಇತರ ಕಾಲೇಜುಗಳಿಗೆ ವಿಸ್ತರಣೆ.

ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್
ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್

ಬೆಂಗಳೂರು: ದೈನಂದಿನ ವಿದ್ಯಾಭ್ಯಾಸದ ಒತ್ತಡದ ನಡುವೆ ಗುಣಮಟ್ಟದ ಮತ್ತು ಕೈಗೆಟುಕುವ ದರದ ಆಹಾರಕ್ಕಾಗಿ ಪರದಾಡುವ ಬೆಂಗಳೂರಿನ (Bengaluru) ವಿದ್ಯಾರ್ಥಿಗಳಿಗೆ (Students) ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಖ್ಯಮಂತ್ರಿ (CM) ಸಿದ್ದರಾಮಯ್ಯನವರ ಬಜೆಟ್ ಭರವಸೆಯಂತೆ, ಇದೀಗ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‍ಗಳನ್ನು (Indira Canteen) ತೆರೆಯಲು ವೇದಿಕೆ ಸಿದ್ಧವಾಗಿದೆ.

ಯೋಜನೆಯ ರೂಪುರೇಷೆ ಏನು?

ಜಿಬಿಎ ಈ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದು, ಈಗಾಗಲೇ ದಕ್ಷಿಣ ಮತ್ತು ಪಶ್ಚಿಮ ನಗರ ಪಾಲಿಕೆಗಳಿಗೆ ಈ ನಿಟ್ಟಿನಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದೆ. ಯೋಜನೆಯ ಒಟ್ಟು ನಿರ್ಮಾಣ ವೆಚ್ಚ, ಅನುದಾನ ಲಭ್ಯತೆ ಮತ್ತು ಕಾರ್ಯಸಾಧ್ಯತೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆಗಳು ನಡೆದಿವೆ. ವಿದ್ಯಾರ್ಥಿಗಳಿಗೆ ಉತ್ತಮ ಪೌಷ್ಟಿಕ ಆಹಾರವನ್ನು ನೀಡುವ ಗುರಿಯೊಂದಿಗೆ ಈ ಕಾರ್ಯ ಯೋಜನೆ ರೂಪಿಸಲಾಗುತ್ತಿದೆ.
ಮೊದಲ ಹಂತದಲ್ಲಿ ಎರಡು ಕಾಲೇಜುಗಳು

ಪ್ರಾಯೋಗಿಕವಾಗಿ ನಗರದ ಎರಡು ಪ್ರಮುಖ ಕಾಲೇಜುಗಳಲ್ಲಿ ಮೊದಲ ಹಂತವಾಗಿ ಈ ಕ್ಯಾಂಟೀನ್‍ಗಳನ್ನು ತೆರೆಯಲು ಯೋಜಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಮತ್ತು ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಈ ಸೇವೆಯನ್ನು ರಾಜ್ಯದ ಇತರ ಕಾಲೇಜುಗಳಿಗೂ ವಿಸ್ತರಿಸುವ ಆಲೋಚನೆಯಲ್ಲಿ ಸರ್ಕಾರವಿದೆ.
ವಿದ್ಯಾರ್ಥಿಗಳಿಗೆ ಲಾಭವೇನು?

ನಗರದ ದುಬಾರಿ ಹೋಟೆಲ್ ಊಟಗಳಿಗೆ ಹೋಲಿಸಿದರೆ, ಇಂದಿರಾ ಕ್ಯಾಂಟೀನ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶುಚಿರುಚಿಯಾದ ಭೋಜನ ಲಭ್ಯವಿರುತ್ತದೆ. ಇದು ವಿದ್ಯಾರ್ಥಿಗಳ ದೈನಂದಿನ ವೆಚ್ಚವನ್ನು ತಗ್ಗಿಸುವುದರ ಜೊತೆಗೆ, ಸಮಯವನ್ನೂ ಉಳಿಸುತ್ತದೆ. ಕಾಲೇಜು ಆವರಣದಲ್ಲೇ ಅಥವಾ ಹತ್ತಿರದಲ್ಲೇ ಊಟದ ವ್ಯವಸ್ಥೆ ಸಿಗುತ್ತಿರುವುದು ವಿದ್ಯಾರ್ಥಿಗಳಿಗೆ ದೊಡ್ಡ ಸಮಾಧಾನದ ವಿಷಯವಾಗಿದೆ.

ಇದನ್ನೂ ಓದಿ: Heavy Rain: ರಾಜ್ಯದ ಜನರೇ ಎಚ್ಚರ, ಮತ್ತೆ ಎರಡು ದಿನ ಭಾರೀ ಮಳೆ!

ಬೆಂಗಳೂರಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರದಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ, ಎಂದು ತಿಳಿಸಿರುವ ಅಧಿಕಾರಿಗಳು, ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಕ್ಯಾಂಟೀನ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದ್ಯ ಜಾಗ ಗುರುತಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಶೀಘ್ರವೇ ವಿದ್ಯಾರ್ಥಿಗಳಿಗೆ ಈ ಸೇವೆ ಲಭ್ಯವಾಗಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed