International Yoga day 2023:ಕಾಫಿನಾಡಲ್ಲಿ ಯೋಗ ದಿನಾಚರಣೆ, 800ಕ್ಕೂ ಅಧಿಕ ಜನರಿಂದ ಯೋಗಾಭ್ಯಾಸ | International Yoga Day 2023 Celebration In Chikkamagaluru

Chikkamagaluru

lekhaka-Veeresha H G

By ಒನ್‌ ಒಂಡಿಯಾ ಡೆಸ್ಕ್‌

|

Google Oneindia Kannada News

ಚಿಕ್ಕಮಗಳೂರು ಜೂನ್‌ 21: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿಶ್ವ ಯೋಗ ದಿನಾಚರಣೆ ಸಮಿತಿಯಿಂದ ಯೋಗ ದಿನಾಚರಣೆ ಆಚರಿಸಲಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬೆಳಗ್ಗೆ 6 ಗಂಟೆಯಿಂದಲೇ 800ಕ್ಕೂ ಅಧಿಕ ಜನ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ. ಒಂದೂವರೆ ಗಂಟೆ ನಡೆದ ಯೋಗ ದಿನಾಚರಣೆಯಲ್ಲಿ ಹತ್ತಾರು ಯೋಗ ಭಂಗಿಗಗಳನ್ನು ಮಾಡಲಾಯಿತು.

International Yoga Day 2023

ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಯೋಗದ ಮಹತ್ವದ ಬಗ್ಗೆಯ ಭಾಷಣವನ್ನು ಎಲ್.ಇ.ಡಿ.ಸ್ಕ್ರೀನ್ ಮೂಲಕ ಪ್ರಸಾರ ಮಾಡಲಾಯಿತು. ಇದೇ ವೇಳೆ ವೇದಿಕೆ ಕಾರ್ಯಕ್ರಮ ಕೂಡ ನಡೆದಿದ್ದು, ನಿತ್ಯ ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯೋಗದ ಮಹತ್ವವನ್ನು ಯೋಗದಲ್ಲಿ ಪಾಲ್ಗೊಂಡವರೆಗೆ ತಿಳಿಸಿದರು.‌

ಚಾಮರಾಜನಗರದಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಚಾಮರಾಜನಗರ: ಚಾಮರಾಜನಗರದಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

International Yoga day 2023: ಬಳ್ಳಾರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ, ಜನಪ್ರತಿನಿಧಿಗಳ ಗೈರುInternational Yoga day 2023: ಬಳ್ಳಾರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ, ಜನಪ್ರತಿನಿಧಿಗಳ ಗೈರು

ನಗರದ ಖಾಸಗಿ ಭವನದಲ್ಲಿ ಜಿಲ್ಲಾಡಳಿತದಿಂದ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಐನೂರಕ್ಕೂ ಹೆಚ್ಚು ಜನರು ಸಾಮೂಹಿಕ ಯೋಗಾಭ್ಯಾಸ ಮಾಡಿದರು. ವಿದ್ಯಾರ್ಥಿಗಳ ಜೊತೆ ಯೋಗಪಟುಗಳು ಉತ್ಸಾಹದಿಂದ ಪಾಲ್ಗೊಂಡಿದ್ದು, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಹಾಗೂ ಎಡಿಸಿ ಕಾತ್ಯಾಯಿನಿದೇವಿ ವಿದ್ಯಾರ್ಥಿಗಳ ಜೊತೆ ಹತ್ತಾರು ಆಸನಗಳನ್ನು ಮಾಡಿದರು.

ಚಾಮರಾಜನಗರದಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಡಿಸಿ, ಎಡಿಸಿ ಹಾಗೂ ನಗರಸಭೆ ಆಯುಕ್ತರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

English summary

Central Minister Shobha Karandlaje participated in International Yoga Day 2023 celebration in Chikkamagaluru. Know more

Story first published: Wednesday, June 21, 2023, 9:24 [IST]

Source link