International Yoga Day 2023: ಸಾಂಸ್ಕೃತಿಕ ನಗರಿಯಲ್ಲಿ ಯೋಗಾಸನ, ಭಾಗಿಯಾಗಿದ್ದು ಎಷ್ಟು ಸಾವಿರ ಜನ ಗೊತ್ತಾ?, ಇಲ್ಲಿದೆ ವಿವರ | International Yoga Day 2023: Yogasana by 12 thousand peoples front of Mysuru palace

Mysuru

oi-Madhusudhan KR

By ಮೈಸೂರು ಪ್ರತಿನಿಧಿ

|

Google Oneindia Kannada News

ಮೈಸೂರು, ಜೂನ್‌, 21: ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಇಂದು ದೇಶಾದ್ಯಂತ ಯೋಗಾಸನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ರಾಜ್ಯದ ಮೈಸೂರು ಜಿಲ್ಲೆಯ ಹಲವೆಡೆ ಯೋಗಾಸನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಜಿಲ್ಲೆಯ ಹಲವೆಡೆಯಿಂದ ಬಂದತಹ ಜನರು ಕೂಡ ಇಲ್ಲಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಗಮನ ಸೆಳೆದರು. ಹಾಗಾದರೆ ಈ ಸಂದರ್ಭದಲ್ಲಿ ಎಷ್ಟು ಜನ ಭಾಗಿಯಾಗಿದ್ದರು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ.

ಪ್ರತಿವರ್ಷದಂತೆ ಈ ವರ್ಷವೂ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ 12 ಮಂದಿ ಯೋಗಾಸನ ಮಾಡಿ ಗಮನ ಸೆಳೆದರು. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 500 ಜನರಿಂದ ಸಾಂಕೇತಿಕ ಯೋಗ ಪ್ರದರ್ಶನ ಹಾಗೂ ನಗರದ ಅರಮನೆಯ ಮೈದಾನದಲ್ಲಿ 12 ಸಾವಿರ ಜನರು ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

International Yoga Day 2023: Yogasana by 12 thousand peoples front of Mysuru palace

ಬೆಳಗ್ಗೆ 6:30ರಿಂದ 8ರವರೆಗೆ ಯೋಗ ಕಾರ್ಯಕ್ರಮ ನಡೆಯಿತು. ಯೋಗ ಮ್ಯಾಟ್ ಹಿಡಿದು ಹಾಗೂ ಬಿಳಿ ಬಣ್ಣದ ಟಿ ಶರ್ಟ್ ಧರಿಸಿ ಆಗಮಿಸಿದ್ದ ಯೋಗಪಟುಗಳು 45 ನಿಮಿಷಗಳ ಕಾಲ ನಾನಾ ಭಂಗಿಯ ಯೋಗಾಸನ ಮಾಡಿದರು. ಇನ್ನು ಯೋಗ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಂಬ್ಯುಲೆನ್ಸ್‌, ಶೌಚಗೃಹ, ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲಾಗಿತ್ತು.

ಜಿಲ್ಲೆಯ ಯೋಗ ಸಂಸ್ಥೆಗಳು, ಆಯುಷ್ ಇಲಾಖೆ, ಯುವಸಬಲೀಕರಣ ಮತ್ತು ಕ್ರಿಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಎನ್‌ಎಸ್‌ಎಸ್ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಗ ತರಬೇತುದಾರರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಈ ಬಾರಿ ಪ್ರತಿ ಮನೆ ಅಂಗಳಕ್ಕೂ ಯೋಗ ಎಂಬ ಧ್ಯೇಯವಾಕ್ಯ ಬರೆಯುವ ಮೂಲಕ ಯೋಗ ದಿನವನ್ನು ಆಚರಿಸಲಾಯಿತು.

International Yoga Day 2023: ಚೆನ್ನೈನಲ್ಲಿ ಶಿಷ್ಯರಿಗೆ ಯೋಗಾಸನ ಹೇಳಿಕೊಟ್ಟ ಪೇಜಾವರ ಶ್ರೀInternational Yoga Day 2023: ಚೆನ್ನೈನಲ್ಲಿ ಶಿಷ್ಯರಿಗೆ ಯೋಗಾಸನ ಹೇಳಿಕೊಟ್ಟ ಪೇಜಾವರ ಶ್ರೀ

ಬೆಳಗ್ಗೆ 7ರಿಂದ 7:45ರವರೆಗೆ ಯೋಗಪಟುಗಳು ಯೋಗಾಸನ ಮಾಡಿದರು. 4 ನಿಮಿಷ ಲಘು ವ್ಯಾಯಾಮ ಮಾಡಿ ಯೋಗಾಸನಕ್ಕೆ ಸಿದ್ಧತೆ ಮಾಡಿಕೊಂಡರು. ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ, ಅರ್ಧ ಚಕ್ರಾಸನ, ತ್ರಿಕೋನಾಸನ, ಸಮದಂಡಾಸನವನ್ನು ಯೋಗಪಟುಗಳು ಪ್ರದರ್ಶ ಮಾಡಿದರು.

ಬಳಿಕ ಭದ್ರಾಸನ, ವಜ್ರಾಸನ, ಅರ್ಧ ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ ಹೀಗೆ ವಿವಿಧ ಆಸನಗಳನ್ನು 25 ನಿಮಿಷಗಳ ಕಾಲ ಮಾಡಿ ಬಳಿಕ ಕಪಾಲಭಾತಿ, ನಾಡಿಶೋಧ, ಪ್ರಾಣಾಯಾಮ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು, ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ವಿವಿಧ ಯೋಗ ನಿರತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2015ರಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಜೂನ್ 21 ಅನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡಬೇಕು ಎಂದು ವಿಶ್ವ ಸಂಸ್ಥೆಯಲ್ಲಿ ಮಂಡಿಸಿದರು. ಬಹುತೇಕ ರಾಷ್ಟ್ರಗಳು ಇದಕ್ಕೆ ಒಪ್ಪಿಗೆ ಸೂಚಿಸಿದವು. ಅಂದಿನಿಂದ ವಿಶ್ವ ಯೋಗ ದಿನಾಚರಣೆ ಮಾಡಲಾಗುತ್ತಿದೆ. ಹಾಗೆಯೇ ಮೈಸೂರನ್ನು ಸಿಟಿ ಆಫ್ ಯೋಗ ಎಂದು ಕರೆಯಲಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ ಅವರು ಮಾತನಾಡಿ, ನಾವು ಚಿಕ್ಕವರಿದ್ದಾಗ ಡಾ.ರಾಜ್‌ಕುಮಾರ್ ಅವರ ಯೋಗವನ್ನು ನೋಡುತ್ತಿದ್ದೆ. ಯೋಗ ಮಾಡುವುದರಿಂದ ದೇಹಕ್ಕೆ ತೇಜಸ್ಸನ್ನು ನೀಡುತ್ತದೆ. ಯೋಗ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ದಿನವಿಡೀ ಉಲ್ಲಾಸದಿಂದ ಇರಲು ಸಹಕಾರಿಯಾಗುತ್ತದೆ. ದೇಶ ಕಾಯುವ ಸೈನಿಕರಿಗೂ ಯೋಗ ಮಾಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಮಾತನಾಡಿ, ಯೋಗ ವಿಶ್ವದಲ್ಲಿ ಪ್ರಸಿದ್ದಿ ಪಡೆದಿದೆ. ಯೋಗದ ಮಹತ್ವ ವಿಶ್ವಕ್ಕೆ ತಿಳಿದಿದೆ. ಅದರಲ್ಲೂ ಮೈಸೂರು ಯೋಗಕ್ಕೆ ಪ್ರಸಿದ್ದಿ ಪಡೆದಿದೆ. ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಿತ್ತು. ಯೋಗ ಆರೋಗ್ಯಕ್ಕೆ ಉತ್ತಮ ಪ್ರಯೋಜನ ನೀಡುತ್ತದೆ. ಎಲ್ಲಾ ಯೋಗ ಸಂಘ ಸಂಸ್ಥೆಗಳು ಯೋಗ ಬೆಳೆಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಮತ್ತೊಮ್ಮೆ ಯೋಗದಲ್ಲಿ ಮೈಸೂರು ಗಿನ್ನಿಸ್ ದಾಖಲೆ ಮಾಡಬೇಕು ಎಂದರು.

ಶ್ರೀ ಸೋಮೇಶ್ವರ ಸ್ವಾಮೀಜಿ ಅವರು ಮಾತನಾಡಿ, ಯೋಗ ಮನಸ್ಸನ್ನು ಹಿಡಿತದಲ್ಲಿ ಇಡುತ್ತಡೆ. ವಿಶ್ವದ 186 ದೇಶಗಳಲ್ಲಿ ಯೋಗ ಸ್ಥಾನ ಪಡೆದಿದೆ. ಸನಾತನ ಋಷಿಗಳು ಯೋಗವನ್ನು ನೀಡಿದರು ಎಂದು ಮಾಹಿತಿ ನೀಡಿದರು. ಹಾಗೆಯೇ ಇಂದು ಮೈಸೂರಿನಲ್ಲಿ ಶಂಕ ನಾದವನ್ನು ಮೊಳಗಿಸುವ ಮೂಲಕ ಯೋಗವನ್ನು ಪ್ರಾರಂಭಿಸಲಾಯಿತು. ಈ ವೇಳೆ ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು ಭಾಗವಹಿಸಿ ಯೋಗಾಸನ ಮಾಡಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮುಖಂಡರಾದ ತನ್ವೀರ್ ಪಾಷಾ ಸೇರಿದಂತೆ ವಿವಿಧ ಧರ್ಮಗುರುಗಳು ಹಾಗೂ ಯೋಗಪಟುಗಳು ಭಾಗವಹಿಸಿದ್ದರು.

English summary

International Yoga Day 2023: Yogasana by 12 thousand peoples front of Mysuru palace, Detials of participants in Yogasana program.

Source link