Last Updated:
ಹಿಜ್ಬೊಲ್ಲಾ ಹೋರಾಟಗಾರರು ಡ್ರೋನ್‌ಗಳಿಂದ IDF ಸೈನಿಕರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು IDF ಆರೋಪಿಸಿದೆ. IDF ಈ ದಾಳಿಯನ್ನು ಖಂಡಿಸಿದ್ದು, ಇದು ಹೆಜ್ಬೊಲ್ಲಾ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕರೆದಿದೆ.
Israeli Airstrikes Lebanon: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಮತ್ತೊಮ್ಮೆ ತನ್ನ ತೀವ್ರ ದಾಳಿಯನ್ನು ನಡೆಸಿದೆ. ಲೆಬನಾನ್‌ನ ಸಾರ್ವಜನಿಕ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ ಸೋಮವಾರ ಬಿಡುಗಡೆ ಮಾಡಿದ ಪ್ರಾಥಮಿಕ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ದಿನಗಳಲ್ಲಿ ದಕ್ಷಿಣ ಲೆಬನಾನ್ ಮೇಲೆ ಇಸ್ರೇಲಿ ನಡೆಸಿದ ದಾಳಿಗಳಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಮತ್ತು 69 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮಕ್ಕಳು, ಮಹಿಳೆಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದ್ದಾರೆ.














