Last Updated:
ಜೈಲರ್ 2 ಟ್ರೇಲರ್ ಬಿಡುಗಡೆಯಾಗಿದೆ. 2023ರಲ್ಲಿ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡ ಜೈಲರ್ ಚಿತ್ರದ ಮುಂದುವರಿದ ಭಾಗ ಇದಾಗಿದ್ದು, ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದಲ್ಲಿ ಮೂಡಿಬಂದಿದೆ.
ರಜನಿಕಾಂತ್ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ. ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರದ ಟ್ರೇಲರ್ ಇಂದು (ಅಕ್ಟೋಬರ್ 5) ಬಿಡುಗಡೆಯಾಗಿದೆ. 2023ರಲ್ಲಿ ಭರ್ಜರಿ ಯಶಸ್ಸು ಕಂಡ ‘ಜೈಲರ್’ ಚಿತ್ರದ ಮುಂದುವರಿದ ಭಾಗವಾಗಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶಿಸಿದ್ದಾರೆ. ಟ್ರೇಲರ್ನಲ್ಲಿ ರಜನಿಕಾಂತ್ ಮಾಸ್ ಅವತಾರ, ಆಕ್ಷನ್ ದೃಶ್ಯಗಳು ಹಾಗೂ ನೆಲ್ಸನ್ ಶೈಲಿಯ ಹಾಸ್ಯದ ಝಲಕ್ ಕಾಣಿಸಿಕೊಂಡಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಕ್ಟೋಬರ್ 15ರಂದು ಸಿನಿಮಾ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಟ್ರೇಲರ್ನಲ್ಲಿ ರಜನಿಕಾಂತ್ ಮತ್ತೊಮ್ಮೆ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಒಂದು ಕಡೆ ಫ್ಯಾಮಿಲಿ ಮ್ಯಾನ್ ಆಗಿ ಶಾಂತ ಸ್ವಭಾವದ ಜೊತೆಗೆ ಜೈಲರ್ ಆಗಿ ರೌದ್ರ ಅವತಾರವೂ ಕಾಣಿಸುತ್ತಿದ್ದು, ಆಕ್ಷನ್ ದೃಶ್ಯಗಳು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ಹಾಗೆಯೇ ಹಾಸ್ಯಕ್ಕೂ ಟ್ರೇಲರ್ನಲ್ಲಿ ಜಾಗ ನೀಡಲಾಗಿದೆ.
Jailer 2 trailer peaked here 💥👌
Good trailer & Rajinikanth serving pura AURA 🥵
#Jailer2 #Rajinikanth https://t.co/Z1EzrTkG8n
— suryaspeaks (@suryasunspeaks) October 5, 2026
ಚಿತ್ರದಲ್ಲಿ ಎಸ್ಜೆ ಸೂರ್ಯ, ವಿದ್ಯಾ ಬಾಲನ್ ಮತ್ತು ಸೂರಜ್ ವೆಂಜರಮೂಡು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣನ್, ಯೋಗಿ ಬಾಬು ಹಾಗೂ ವಿಜಯ್ ಸೇತುಪತಿ ಕೂಡ ತಾರಾಗಣದಲ್ಲಿದ್ದಾರೆ. ಹಾಗೆಯೇ ಮೋಹನ್ ಲಾಲ್ ಮತ್ತು ನಮ್ಮ ಶಿವಣ್ಣ ಸೇರಿ ಅನೇಕರು ಕಾಣಿಸಿಕೊಂಡಿದ್ದಾರೆ.
ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಸಿನಿಪ್ರಿಯರನ್ನು ರಂಜಿಸುತ್ತಿರುವ ಶಿವಣ್ಣ, ಇದೀಗ ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಜೈಲರ್ 2 ಸಿನಿಮಾ ಅಕ್ಟೋಬರ್ 15, 2026ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆಯೊಂದಿಗೆ ಚಿತ್ರದ ಪ್ರಚಾರಕ್ಕೆ ಮತ್ತಷ್ಟು ವೇಗ ಸಿಕ್ಕಿದ್ದು, ಮುತ್ತುವೇಲ್ ಪಾಂಡಿಯನ್ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲಿದ್ದಾರೆಯೇ ಎಂಬ ಕುತೂಹಲ ಹೆಚ್ಚಿದೆ.














