Jammu and Kashmir: ಪಹಲ್ಗಾಮ್ ದಾಳಿಯ ವರ್ಷದ ಬಳಿಕ ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಪೊಲೀಸ್ ಕಾನ್ಸ್‌ಟೇಬಲ್ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಆಶಿಕ್ ಹುಸೇನ್ ಖುರೇಸಿ, ಪೊಲೀಸ್ ಕಾನ್ಸ್ ಟೇಬಲ್


Last Updated:

ಅನಂತ್‌ನಾಗ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಶಿಕ್ ಹುಸೇನ್ ಖುರೇಷಿ ಹತ್ಯೆ. ಲಷ್ಕರ್ ಎ ತೈಬಾದ ಟಿಆರ್‌ಎಫ್ ಹೊಣೆ ಹೊತ್ತಿದೆ. ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ.

ಆಶಿಕ್ ಹುಸೇನ್ ಖುರೇಸಿ, ಪೊಲೀಸ್ ಕಾನ್ಸ್ ಟೇಬಲ್
ಆಶಿಕ್ ಹುಸೇನ್ ಖುರೇಸಿ, ಪೊಲೀಸ್ ಕಾನ್ಸ್ ಟೇಬಲ್

ಅನಂತ್​​ನಾಗ್: ಕಳೆದ ವರ್ಷ ಪಹಲ್ಗಾಮ್ ದಾಳಿಯ (Pahalgam Attack) ನಂತರ ಜಮ್ಮು ಕಾಶ್ಮೀರದ ಕಣಿವೆಯಲ್ಲಿ (Jammu and Kashmir) ಮೊದಲ ಭಯೋತ್ಪಾದಕ ಘಟನೆ ವರದಿಯಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ ಹುತಾತ್ಮರಾಗಿದ್ದಾರೆ. ಬುಧವಾರ ಅನಂತ್​​ನಾಗ್‌ನಲ್ಲಿ (Lal Chowk in Anantnag) ಬೈಕ್ ಮೇಲೆ ಬಂದ ಉಗ್ರ ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಗುಂಡು ಹಾರಿಸಿ ಎಸ್ಕೇಪ್ ಆಗಿದ್ದಾನೆ ಎಂದು ಎಎನ್​ಐ ವರದಿ ಮಾಡಿದೆ.

ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಇಂಡಿಯಾ ರಿಸರ್ವ್​ (ಐಆರ್) 3ನೇ ಬೆಟಾಲಿಯನ್ ಕಾನ್ಸ್ಟೇಬಲ್, ಬುಡ್ಗಾಮ್ ಜಿಲ್ಲೆಯ ನಿವಾಸಿ ಆಶಿಕ್ ಹುಸೇನ್ ಖುರೇಸಿ (35) ಎಂದು ಗುರುತಿಸಲಾಗಿದೆ. ಘಟನೆ ಹೊಣೆಯನ್ನು ಉಗ್ರ ಸಂಘಟನೆಯಾದ ಲಷ್ಕರ್ ಎ ತೈಬಾದ ಶಾಡೋ ಆರ್ಗನೈಜೇಷನ್ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್​ಎಫ್) ವಹಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅನಂತ್ ನಾಗ್ ಲಾಲ್ ಚೌಕ್ ಬಳಿ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಮೇಲೆ ಭಯೋತ್ಪಾದಕ ಗುಂಡು ಹಾರಿಸಿ ಎಸ್ಕೇಪ್ ಆಗಿದ್ದಾನೆ. ಗುಂಡಿನ ಶಬ್ದ ಕೇಳಿ ಬರುತ್ತಿದ್ದಂತೆ ಸ್ಥಳೀಯರು ಆತಂಕಗೊಂಡಿದ್ದಾರೆ. ಕೂಡಲೇ ದಾಳಿಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದ್ದರು. ನಿಯಮಗಳ ಅನ್ವಯ ವೈದ್ಯಕೀಯ-ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.

ದಾಳಿಯ ಬೆನ್ನಲ್ಲೇ ಭಾರತ ಭದ್ರತಾ ಪಡೆಗಳು ಘಟನೆ ನಡೆದ ಪ್ರದೇಶವನ್ನು ಸುತ್ತುವರೆದಿದ್ದು, ದಾಳಿಕೋರನನ್ನು ಪತ್ತೆ ಮಾಡಲು ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜನೆ ಮಾಡಲಾಗಿದ್ದು, ದಾಳಿಕೋರರನ್ನು ಗುರುತಿಸಿ ಪತ್ತೆ ಮಾಡಲು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ್ ಬಳಿಕ ಭಾರತದ ಭದ್ರತಾ ಪಡೆಗಳು ಭಯೋತ್ಪಾದನಾ ನಿಗ್ರಹವನ್ನು ತೀವ್ರಗೊಳಿಸಿದ್ದವು, ಆದರೆ ಒಂದು ವರ್ಷದ ಬಳಿಕ ಮತ್ತೆ ಕೇಂದ್ರಾಡಳಿತ ಪ್ರದೇಶದಲ್ಲಿ ದಾಳಿ ನಡೆದಿದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಕಳೆದ ವರ್ಷ 26 ಮಂದಿ ಭಾರತೀಯರನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು ಕಾಶ್ಮೀರದಲ್ಲಿ ನಡೆದ ಮೊದಲ ಭಯೋತ್ಪಾದಕ ದಾಳಿ ಅಂತಲೇ ಈ ದಾಳಿಯನ್ನು ಪರಿಗಣಿಸಲಾಗಿದೆ.

ಘಟನೆ ಬಳಿಕ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲನೆ ನಡೆಸಿದರು. ಇದೇ ವೇಳೆ ದಾಳಿಯಲ್ಲಿ ಜೀವ ಕಳೆದುಕೊಂಡ ಆಶಿಕ್ ಹುಸೇನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇತ್ತ ಜಮ್ಮು ಕಾಶ್ಮೀರ ಸಿಎಂ ಕೂಡ, ಸಂತಾಪ ಸೂಚಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed