Jason Sanjay: ಅಪ್ಪ ವಿಜಯ್ ಹಾದಿಯಲ್ಲಿ ಮಗ ಜೇಸನ್ ಸಂಜಯ್? ಇಲ್ಲಿದೆ ಹೊಸ ಸುದ್ದಿ! | | ACTPnews

News18


Last Updated:

ವಿಜಯ್ ಪುತ್ರ ಜೇಸನ್ ಸಂಜಯ್ (Jason Sanjay) ಈಗಾಗಲೇ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ಇದೀಗ ನಾಯಕ ನಟನಾಗಿ ಪ್ರೇಕ್ಷಕರ ಮುಂದೆ ಬರಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಕುತೂಹಲ ಮೂಡಿಸಿದೆ.

News18
News18

ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್ (Jason Sanjay) ಈಗಾಗಲೇ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ಇದೀಗ ನಾಯಕ ನಟನಾಗಿ ಪ್ರೇಕ್ಷಕರ ಮುಂದೆ ಬರಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ತಮಿಳು ಚಿತ್ರರಂಗದಲ್ಲಿ ಕುತೂಹಲ ಮೂಡಿಸಿದೆ. ಮೊದಲ ನಿರ್ದೇಶನದ ಸಿನಿಮಾ ನಿರೀಕ್ಷಿತ ಯಶಸ್ಸು ಕಾಣದ ಬೆನ್ನಲ್ಲೇ ಜೇಸನ್ ಸಂಜಯ್ ತಮ್ಮ ವೃತ್ತಿಜೀವನದಲ್ಲಿ ಹೊಸ ಹೆಜ್ಜೆ ಇಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಜೇಸನ್ ಸಂಜಯ್ ನಟನೆಯತ್ತ ಒಲವು

ತಮಿಳು ಚಿತ್ರರಂಗದ ಜನಪ್ರಿಯ ನಟ ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್ ಈಗ ತಮ್ಮದೇ ಆದ ಗುರುತನ್ನು ರೂಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಈ ಹಿಂದೆ ನಿರ್ದೇಶನದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಅವರು, ಇದೀಗ ನಟನೆಯತ್ತ ಗಮನ ಹರಿಸಿದ್ದಾರೆ ಎನ್ನಲಾಗಿದೆ. ನಾಯಕ ನಟನಾಗಿ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲು ಸಿದ್ಧತೆ ನಡೆಸುತ್ತಿರುವ ಜೇಸನ್ ಅವರ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

ನಿರ್ದೇಶಕರಾಗಿ ಅವರು ಸಂದೀಪ್ ಕಿಷನ್ ನಾಯಕನಾಗಿ ನಟಿಸಿದ್ದ ಸಿಗ್ಮಾ ಸಿನಿಮಾವನ್ನು ನಿರ್ದೇಶಿಸಿದ್ದರು. ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಿದ್ದ ಈ ಚಿತ್ರ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಆದರೆ, ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಜೇಸನ್ ತಮ್ಮ ಮುಂದಿನ ಹೆಜ್ಜೆಯನ್ನು ನಟನೆಯ ಮೂಲಕ ಇಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಲೈಕಾ ಪ್ರೊಡಕ್ಷನ್ಸ್‌ನಿಂದಲೇ ಹೊಸ ಸಿನಿಮಾ ನಿರ್ಮಾಣ?

ಜೇಸನ್ ಸಂಜಯ್ ಅವರ ಚೊಚ್ಚಲ ಅಭಿನಯದ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯೇ ನಿರ್ಮಿಸಲು ಮುಂದಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಈ ಹಿಂದೆ ಅವರ ನಿರ್ದೇಶನದ ಚಿತ್ರಕ್ಕೆ ಬೆಂಬಲ ನೀಡಿದ್ದ ನಿರ್ಮಾಣ ಸಂಸ್ಥೆ, ಇದೀಗ ನಟನಾಗಿಯೂ ಅವರನ್ನು ಪರಿಚಯಿಸಲು ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

ಹೊಸ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಯಾರಿಗೆ ನೀಡಬೇಕು ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ. ತಮಿಳಿನ ಖ್ಯಾತ ನಿರ್ದೇಶಕ ಲಿಂಗುಸಾಮಿ ಸೇರಿದಂತೆ ಹಲವು ನಿರ್ದೇಶಕರ ಹೆಸರುಗಳು ಕೇಳಿಬರುತ್ತಿವೆ. ಅಲ್ಲದೆ, ಸಿಗ್ಮಾ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ಸಂಜೀವ್ ಕೂಡ ಈ ಚಿತ್ರವನ್ನು ನಿರ್ದೇಶಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಆದರೆ, ಈ ಕುರಿತು ಚಿತ್ರತಂಡದಿಂದ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

35 ಕೋಟಿ ರೂಪಾಯಿ ಬಜೆಟ್, 10 ಕೋಟಿ ಸಂಭಾವನೆ?

ಜೇಸನ್ ಸಂಜಯ್ ಅವರ ಚೊಚ್ಚಲ ಅಭಿನಯದ ಚಿತ್ರಕ್ಕೆ ಸುಮಾರು 35 ಕೋಟಿ ರೂಪಾಯಿ ಬಜೆಟ್ ಮೀಸಲಿಡಲಾಗಿದೆ ಎಂಬ ಮಾಹಿತಿ ಚರ್ಚೆಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ, ಮೊದಲ ಸಿನಿಮಾದಲ್ಲೇ ನಾಯಕ ನಟನಾಗಿ ಕಾಣಿಸಿಕೊಳ್ಳಲಿರುವ ಜೇಸನ್ ಅವರಿಗೆ 10 ಕೋಟಿ ರೂಪಾಯಿ ಸಂಭಾವನೆ ನೀಡಲಾಗುತ್ತಿದೆ ಎಂಬ ವರದಿಗಳೂ ಇವೆ.

ಜೇಸನ್ ಅವರ ತಾಯಿಯ ಕಡೆಯ ಕುಟುಂಬದ ಸದಸ್ಯರು ಈ ಯೋಜನೆಯ ಹಿಂದೆ ಬೆಂಬಲವಾಗಿ ನಿಂತಿದ್ದಾರೆ ಎನ್ನಲಾಗಿದೆ. ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್ ಅವರ ಸಹಕಾರದೊಂದಿಗೆ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸುವ ಯೋಜನೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಬಜೆಟ್, ಸಂಭಾವನೆ ಮತ್ತು ನಿರ್ಮಾಣದ ವಿವರಗಳಿಗೆ ಸಂಬಂಧಿಸಿದಂತೆ ಅಧಿಕೃತ ದೃಢೀಕರಣ ಇನ್ನಷ್ಟೇ ಬರಬೇಕಿದೆ.

ಜೇಸನ್ ಸಂಜಯ್ ಅವರ ಹೊಸ ಸಿನಿಮಾದ ನಿರ್ದೇಶಕರು ಯಾರು, ನಾಯಕಿಯಾಗಿ ಯಾರು ನಟಿಸಲಿದ್ದಾರೆ ಮತ್ತು ಚಿತ್ರೀಕರಣ ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಶೀಘ್ರದಲ್ಲೇ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ ಹೊರಬೀಳಬಹುದು ಎಂಬ ನಿರೀಕ್ಷೆಯಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed