JP Nadda: ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಸಿದ್ಧ ಎಂದ ಜೆಪಿ ನಡ್ಡಾ! ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸಚಿವ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಕೇಂದ್ರ ಸಚಿವ ಜೆಪಿ ನಡ್ಡಾ


Last Updated:

ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ವಿಷಯದಿಂದ ರಾಜಕೀಯ ಲಾಭ ಪಡೆಯುವುದು ಸರಿಯಲ್ಲ, ಸರ್ಕಾರವು ಪ್ರತಿಯೊಂದು ಆರೋಪವನ್ನು ತನಿಖೆ ಮಾಡುತ್ತದೆ ಎಂದು ಜೆಪಿ ನಡ್ಡಾ ಹೇಳಿದರು.

ಕೇಂದ್ರ ಸಚಿವ ಜೆಪಿ ನಡ್ಡಾ
ಕೇಂದ್ರ ಸಚಿವ ಜೆಪಿ ನಡ್ಡಾ

ದೆಹಲಿ: ನೀಟ್ ಪರೀಕ್ಷೆ ಅಕ್ರಮಗಳ ಬಗ್ಗೆ ಸಂಸತ್‌ನಲ್ಲಿ ಚರ್ಚೆಗೆ ಆಗ್ರಹಿಸಿರುವ ಕಾಂಗ್ರೆಸ್ ದೇಶವ್ಯಾಪಿ ಆಂದೋಲನವನ್ನೇ ಎಬ್ಬಿಸಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ಹೋರಾಟ, ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನೇ ಅಸ್ತ್ರ ಮಾಡಿಕೊಂಡು ಕೇಂದ್ರ ಸರ್ಕಾರದ (Central Government) ವಿರುದ್ಧ ರಾಹುಲ್‌ ಗಾಂಧಿ (Rahul Gandhi) ಹರಿಹಾಯ್ದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda), ನೀಟ್ (NEET) ಅಕ್ರಮ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಗಂಭೀರ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.

ರಾಹುಲ್​ ಗಾಂಧಿ ಸುದ್ದಿಗೋಷ್ಠಿ ಬೆನ್ನಲ್ಲೇ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಹುಲ್​ ಗಾಂಧಿ ಅವರ 150ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಜೆ.ಪಿ. ನಡ್ಡಾ, ಕಾಂಗ್ರೆಸ್​ ಆಡಳಿತದ ರಾಜ್ಯಗಳಲ್ಲೂ ಪ್ರಶ್ನೆ ಪತ್ರಿಕೆ ಲೀಕ್​ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ವಿಷಯದಿಂದ ರಾಜಕೀಯ ಲಾಭ ಪಡೆಯುವುದು ಸರಿಯಲ್ಲ, ಸರ್ಕಾರವು ಪ್ರತಿಯೊಂದು ಆರೋಪವನ್ನು ತನಿಖೆ ಮಾಡುತ್ತದೆ ಮತ್ತು ಸತ್ಯವನ್ನು ಹೊರತರುವ ಕೆಲಸ ಮಾಡುತ್ತದೆ. ರಾಹುಲ್ ಗಾಂಧಿ ವಿದ್ಯಾರ್ಥಿಗಳಿಗೆ ನ್ಯಾಯ ನೀಡುವ ಬಗ್ಗೆ ಗಂಭೀರವಾಗಿಲ್ಲ, ಅವರ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸುವಲ್ಲಿ ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.
ಅರ್ಥಪೂರ್ಣ ಚರ್ಚೆಗೆ ಪ್ರತಿಪಕ್ಷಗಳಿಗೆ ಆಹ್ವಾನ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಜೆ.ಪಿ. ನಡ್ಡಾ ಸ್ಪಷ್ಟಪಡಿಸಿದರು. ಸರ್ಕಾರವು ಆರೋಪ ಮತ್ತು ಪ್ರತ್ಯಾರೋಪಗಳನ್ನು ಮೀರಿ ಸಂಸತ್ತಿನಲ್ಲಿ ಸಮಗ್ರ ಚರ್ಚೆಯಲ್ಲಿ ತೊಡಗಿಸಿಕೊಳ್ಳಲು ಬಯಸುತ್ತದೆ. ಈ ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ನಿಜವಾದ ಕಾರಣವನ್ನು ತಿಳಿಯಲು ಸರ್ಕಾರ ಬಯಸುತ್ತದೆ. ವಿರೋಧ ಪಕ್ಷವು ಸಂಸತ್ತಿನಲ್ಲಿ ಎಷ್ಟು ಗಂಟೆಗಳ ಕಾಲ ಬೇಕಾದರೂ ಈ ವಿಷಯವನ್ನು ಚರ್ಚಿಸಲಿ. ಅರ್ಥಪೂರ್ಣ ಚರ್ಚೆಯು ಶಾಶ್ವತ ಪರಿಹಾರಕ್ಕೆ ಕಾರಣವಾಗುವಂತೆ ವಿರೋಧ ಪಕ್ಷವು ಸಮಯವನ್ನು ನಿಗದಿಪಡಿಸಬೇಕು ಎಂದು ಹೇಳಿದರು.

ಈ ಮಧ್ಯೆ ಸೋನಮ್ ವಾಂಗ್ಚುಕ್ ಬಗ್ಗೆ ಮಾತನಾಡಿದ ಜೆ.ಪಿ. ನಡ್ಡಾ, ಅವರ ಯೋಗಕ್ಷೇಮವನ್ನು ವಿಚಾರಿಸಲು ಹೋಗಿದ್ದೆ ಮತ್ತು ಅವರ ಉಪವಾಸವನ್ನು ಕೊನೆಗೊಳಿಸುವಂತೆ ಮನವಿ ಮಾಡಿದ್ದೇನೆ. ಸರ್ಕಾರವು ಅವರ ಮುಕ್ತ ಪತ್ರಕ್ಕೆ ಖಂಡಿತವಾಗಿಯೂ ಪ್ರತಿಕ್ರಿಯಿಸುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed