Last Updated:
ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ವಿಷಯದಿಂದ ರಾಜಕೀಯ ಲಾಭ ಪಡೆಯುವುದು ಸರಿಯಲ್ಲ, ಸರ್ಕಾರವು ಪ್ರತಿಯೊಂದು ಆರೋಪವನ್ನು ತನಿಖೆ ಮಾಡುತ್ತದೆ ಎಂದು ಜೆಪಿ ನಡ್ಡಾ ಹೇಳಿದರು.
ದೆಹಲಿ: ನೀಟ್ ಪರೀಕ್ಷೆ ಅಕ್ರಮಗಳ ಬಗ್ಗೆ ಸಂಸತ್ನಲ್ಲಿ ಚರ್ಚೆಗೆ ಆಗ್ರಹಿಸಿರುವ ಕಾಂಗ್ರೆಸ್ ದೇಶವ್ಯಾಪಿ ಆಂದೋಲನವನ್ನೇ ಎಬ್ಬಿಸಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ಹೋರಾಟ, ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನೇ ಅಸ್ತ್ರ ಮಾಡಿಕೊಂಡು ಕೇಂದ್ರ ಸರ್ಕಾರದ (Central Government) ವಿರುದ್ಧ ರಾಹುಲ್ ಗಾಂಧಿ (Rahul Gandhi) ಹರಿಹಾಯ್ದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda), ನೀಟ್ (NEET) ಅಕ್ರಮ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಗಂಭೀರ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಜೆ.ಪಿ. ನಡ್ಡಾ ಸ್ಪಷ್ಟಪಡಿಸಿದರು. ಸರ್ಕಾರವು ಆರೋಪ ಮತ್ತು ಪ್ರತ್ಯಾರೋಪಗಳನ್ನು ಮೀರಿ ಸಂಸತ್ತಿನಲ್ಲಿ ಸಮಗ್ರ ಚರ್ಚೆಯಲ್ಲಿ ತೊಡಗಿಸಿಕೊಳ್ಳಲು ಬಯಸುತ್ತದೆ. ಈ ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ನಿಜವಾದ ಕಾರಣವನ್ನು ತಿಳಿಯಲು ಸರ್ಕಾರ ಬಯಸುತ್ತದೆ. ವಿರೋಧ ಪಕ್ಷವು ಸಂಸತ್ತಿನಲ್ಲಿ ಎಷ್ಟು ಗಂಟೆಗಳ ಕಾಲ ಬೇಕಾದರೂ ಈ ವಿಷಯವನ್ನು ಚರ್ಚಿಸಲಿ. ಅರ್ಥಪೂರ್ಣ ಚರ್ಚೆಯು ಶಾಶ್ವತ ಪರಿಹಾರಕ್ಕೆ ಕಾರಣವಾಗುವಂತೆ ವಿರೋಧ ಪಕ್ಷವು ಸಮಯವನ್ನು ನಿಗದಿಪಡಿಸಬೇಕು ಎಂದು ಹೇಳಿದರು.
Bangalore,Karnataka
Jul 22, 2026 10:44 PM IST














