Karachi Attack: ಗುಂಡಿನ ದಾಳಿ, ಆತ್ಮಾಹುತಿ ದಾಳಿಗೆ ತತ್ತರಿಸಿದ ಪಾಕಿಸ್ತಾನ! 3 ಸೈನಿಕರು ಬಲಿ, 6 ಭಯೋತ್ಪಾದಕರ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಸ್ಥಳೀಯ ಮಾಧ್ಯಮಗಳ ಪ್ರಕಾರ, ಜಮಾತ್-ಉಲ್-ಅಹ್ರಾರ್ ಎಂಬ ಭಯೋತ್ಪಾದಕ ಸಂಘಟನೆಯು ಕರಾಚಿ ಬಾಂಬ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಒಂಬತ್ತು ಭಯೋತ್ಪಾದಕರು ಆತ್ಮಹತ್ಯಾ ದಾಳಿ ನಡೆಸಿದ್ದು, ಆತ್ಮಹತ್ಯಾ ದಾಳಿಯನ್ನು ನಿಖರವಾಗಿ ಯೋಜಿಸಲಾಗಿತ್ತು ಎಂದು ತಿಳಿದು ಬಂದಿದೆ.

News18
News18

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ನಿನ್ನೆ (ಶನಿವಾರ) ರಾತ್ರಿ ನಡೆದ ಆತ್ಮಾಹುತಿ ದಾಳಿ ಮತ್ತು ಭಾರೀ ಗುಂಡಿನ ಚಕಮಕಿಗೆ ಇಡೀ ಪಾಕಿಸ್ತಾನವೇ ಬೆಚ್ಚಿ ಬಿದ್ದಿದೆ. ಕರಾಚಿಯ ಗುಲ್ಶನ್-ಎ-ಇಕ್ಬಾಲ್ ಪ್ರದೇಶದಲ್ಲಿರುವ ಸಿಂಧ್ ರೇಂಜರ್ಸ್ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು (Karachi Suicide Attack) ಆತ್ಮಾಹುತಿ ಬಾಂಬರ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಲ್ವರು ಪಾಕಿಸ್ತಾನಿ ರೇಂಜರ್ಸ್ ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಆರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಕರಾಚಿ ಪೊಲೀಸರು ತಿಳಿಸಿದ್ದಾರೆ. ದಾಳಿಯ ಸಮಯದಲ್ಲಿ ಇಬ್ಬರು ಆತ್ಮಹತ್ಯಾ ಬಾಂಬರ್‌ಗಳು ಸಾವನ್ನಪ್ಪಿದರೆ, ಇತರ ಮೂವರು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಂಧ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಜಾವೇದ್ ಆಲಂ ಅವರು, ಭಯೋತ್ಪಾದಕರು ಸ್ಫೋಟಕ ತುಂಬಿದ ವಾಹನವನ್ನು ಸಿಂಧ್ ರೇಂಜರ್ಸ್ ಪ್ರಧಾನ ಕಚೇರಿಯ ಮುಖ್ಯ ದ್ವಾರಕ್ಕೆ ಡಿಕ್ಕಿ ಹೊಡೆದು ನಂತರ ಗುಂಡು ಹಾರಿಸಿದರು, ದಾಳಿಯಲ್ಲಿ ಇಬ್ಬರು ರೇಂಜರ್‌ಗಳು ಸಾವನ್ನಪ್ಪಿದರು. ಪ್ರತಿದಾಳಿಯಲ್ಲಿ ಐದು ಭಯೋತ್ಪಾದಕರು ಸಹ ಸಾವನ್ನಪ್ಪಿದರು ಎಂದು ಹೇಳಿದರು.

ಈ ಪ್ರದೇಶದಲ್ಲಿ ಶೋಧ ಮತ್ತು ಭದ್ರತಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿರುವ ಜಾವೇದ್ ಆಲಂ, ಇಡೀ ಪ್ರದೇಶವನ್ನು ಭದ್ರತಾ ಪಡೆಗಳಿಂದ ಸುತ್ತುವರಿಯಲಾಗಿದೆ. ವಿಶೇಷ ಭದ್ರತಾ ಘಟಕ (SSU), ಭಯೋತ್ಪಾದನಾ ನಿಗ್ರಹ ಪಡೆ (ATF) ಮತ್ತು ಸಿಂಧ್ ರೇಂಜರ್ಸ್‌ನ ಪಡೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಹೇಳಿದರು.

ಮಾಧ್ಯಮ ವರದಿಗಳ ಪ್ರಕಾರ, ಒಬ್ಬ ಆತ್ಮಹತ್ಯಾ ಬಾಂಬರ್ ರೇಂಜರ್ಸ್ ಕಾಂಪೌಂಡ್ ಅನ್ನು ಗುರಿಯಾಗಿಸಿಕೊಂಡು ತನ್ನ ಸ್ಫೋಟಕಗಳನ್ನು ಸ್ಫೋಟಿಸಿಕೊಂಡನು, ಆದರೆ ಅವನ ಇತರ ಸಹಚರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ಇದರಿಂದಾಗಿ ಆ ಪ್ರದೇಶದಲ್ಲಿ ಭೀಕರ ಗುಂಡಿನ ಚಕಮಕಿ ನಡೆಯಿತು. ಮೊದಲ ಸ್ಫೋಟವು ತುಂಬಾ ಪ್ರಬಲವಾಗಿತ್ತು, ನಂತರ ಎರಡು ಸಣ್ಣ ಸ್ಫೋಟಗಳು ಸಂಭವಿಸಿದವು ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ಪ್ರಮುಖ ಪತ್ರಿಕೆ ಡಾನ್ ಪ್ರಕಾರ, ಸಿಂಧ್ ಮುಖ್ಯಮಂತ್ರಿ ಸೈಯದ್ ಮುರಾದ್ ಅಲಿ ಶಾ ಘಟನೆಯ ಬಗ್ಗೆ ವಿವರವಾದ ವರದಿಯನ್ನು ಕೋರಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗಾಗಿ ಪಾಕಿಸ್ತಾನ ರೇಂಜರ್‌ಗಳನ್ನು ಆಗಾಗ್ಗೆ ಕರಾಚಿಯಲ್ಲಿ ನಿಯೋಜಿಸಲಾಗುತ್ತದೆ. ಅದಕ್ಕಾಗಿಯೇ ರೇಂಜರ್ಸ್ ಪ್ರಧಾನ ಕಚೇರಿಯನ್ನು ಹೆಚ್ಚಿನ ಭದ್ರತಾ ಪ್ರದೇಶವೆಂದು ಪರಿಗಣಿಸಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed