Karnataka Assembly Session: ರಾಜ್ಯಪಾಲರ ಭಾಷಣ ಸಪ್ಪೆ: ಹೊಸ ದಿಕ್ಸೂಚಿ ಇಲ್ಲದ ಕವಲು ದಾರಿಯ ರಾಜ್ಯ ಸರ್ಕಾರ | Karnataka: Basavaraj Bommai Reaction About Governor Address in Assembly Joint Session

Karnataka

oi-Shankrappa Parangi

|

Google Oneindia Kannada News

ಬೆಂಗಳೂರು, ಜುಲೈ 03: ಇಂದಿನಿಂದ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದೆ. ಆರಂಭದಲ್ಲಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣ ಸಪ್ಪೆಯಾಗಿದೆ. ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಅಂಶಗಳು ಇಲ್ಲ. ಸುಳ್ಳಿನ ಕಂತೆ ಅಂತೆ ಮತ್ತೆ ಸಾಭಿತಾಗಿದೆ.

Karnataka: Basavaraj Bommai Reaction About Governor Address in Assembly Joint Session

ರಾಜ್ಯ ಸರ್ಕಾರ ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಸಹಿ ಮಾಡಿ ಹೇಳಿದ್ದರು. ಈಗ ಅಕ್ಕಿ ಪೂರೈಸುವ ಕೇಂದ್ರ ಸರ್ಕಾರ ಎಂದು ಹೇಳದೇ ಆಹಾರ ಭದ್ರತೆಯಲ್ಲಿ ಕೊಡುವುದಾಗಿ ಹೇಳಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

 ಗೃಹ ಜ್ಯೋತಿ ಯೋಜನೆ ನೋಂದಣಿ: ನಕಲಿ ಆ್ಯಪ್, ಪೋರ್ಟಲ್‌ಗಳ ಮೂಲಕ ನಿಮ್ಮ ಡೇಟಾ ಕಳ್ಳತನ- ಪೋಲಿಸರ ಎಚ್ಚರಿಕೆ, ಇಲ್ಲಿದೆ ಮಾಹಿತಿ ಗೃಹ ಜ್ಯೋತಿ ಯೋಜನೆ ನೋಂದಣಿ: ನಕಲಿ ಆ್ಯಪ್, ಪೋರ್ಟಲ್‌ಗಳ ಮೂಲಕ ನಿಮ್ಮ ಡೇಟಾ ಕಳ್ಳತನ- ಪೋಲಿಸರ ಎಚ್ಚರಿಕೆ, ಇಲ್ಲಿದೆ ಮಾಹಿತಿ

ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದಾಗಿದೆ. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ ಚಿಂತನೆಯಿಲ್ಲ ಎಂದು ಅವರು ಆರೋಪಿಸಿದರು.

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ

ಇನ್ನು ಮುಖ್ಯಮಂತ್ರಿಯವರ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಸಿಎಂ ಕಚೇರಿಯಲ್ಲಿ ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್‌, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ.

Karnataka: Basavaraj Bommai Reaction About Governor Address in Assembly Joint Session

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಮಾಣಿಕತೆ ಬಗ್ಗೆ ಮಾತನಾಡುತ್ತಾರೆ. ಸಿಎಂ ಕಚೇರಿ ನಡೆದುಕೊಳ್ಳುವ ರೀತಿ ನೋಡಿದರೆ ಭಯ ಆಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ನಮ್ಮಲ್ಲಿ ಎಲ್ಲರೂ ಸಮರ್ಥರು

ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಬೊಮ್ಮಾಯಿ, ಇಲ್ಲಿ ಶಿಸ್ತಿನ ಪ್ರಶ್ನೆ ಇಲ್ಲ‌ ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷನಾಯಕನ ಆಯ್ಕೆಯಾಗಲಿದೆ. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ ಎಂದು ಟೀಕೆಗಳಿಗೆ ಉತ್ತರ ನೀಡಿದರು.

ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿರುವುದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ಆದರೂ ತನಿಖೆ ಮಾಡಿಸಲಿ ಎಂದು ಹೇಳಿದರು.

ರಾಜ್ಯಪಾಲರ ಭಾಷಣ: ಐಸಿಯು ನಲ್ಲಿ ರಾಜ್ಯದ ಆರ್ಥಿಕತೆ: ಎಚ್‌ಡಿಕೆ ಟೀಕೆ

ಮಾಜಿ ಬಸವರಾಜ ಬೊಮ್ಮಾಯಿ ಮಾತ್ರವಲ್ಲದೇ ಜೆಡಿಎಸ್ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಸಹಿತ ರಾಜ್ಯಪಾಲರ ಭಾಷಣ ಕುರಿತು ಪ್ರತಿಕ್ರಿಯಸಿದರು. ಅವರ ಭಾಷಣ ಗಮನಿಸಿದರೆ ಈ ಸರ್ಕಾರವು ಆದಷ್ಟು ಬೇಗ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ವೆಂಟಿಲೇಟರ್ (ಐಸಿಯು) ಮೇಲೆ ಮಲಗಿಸಲಿದೆ ಎಂದು ಅವರು ಟೀಕಿಸಿದರು.

ರಾಜ್ಯಪಾಲರ ಭಾಷಣವು ಕರ್ನಾಟಕವು ಭವಿಷ್ಯದ್ಲಲಿ ಎದುರಿಸಬಹುದಾದ ದರ್ಬರ ದಿನಗಳತ್ತ ಬೊಟ್ಟು ಮಾಡಿದೆ. ಈ ಸರ್ಕಾರ ಐಸಿಯುಗೆ ಹೋಗುವ ಕಾಲವೂ ಶೀಘ್ರವೇ ಬರಲಿದೆ. ಐಸಿಯು, ವೆಂಟಿಲೇಟರ್ ಮೇಲೆ ಕಾಂಗ್ರೆಸ್ ಸರ್ಕಾರ ನಡೆಯುವ ಸನ್ನಿವೇಶ ನಿರ್ಮಾಣ ಆಗಬಹುದು ಎಂದು ಅವರು ಆತಂಕ ವ್ಯಕ್ತಪಡಿದರು.

English summary

Karnataka: Basavaraj Bommai reaction about governor address in assembly joint session,

Story first published: Monday, July 3, 2023, 17:54 [IST]

Source link