Karnataka MLC Election: ಮೂವರು ಕಾಂಗ್ರೆಸ್‌ ಅಭ್ಯರ್ಥಿ ಗಳು ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆ! | Jagadish Shettar Unanimously Elected To Karnataka Legislative Council

Karnataka

oi-Reshma P

|

Google Oneindia Kannada News

ಬೆಂಗಳೂರು, ಜೂನ್‌ 24: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ಕೈ ತಪ್ಪಿದ ಹಿನ್ನಲೆ ಹಲವು ಬಿಜೆಪಿಯ ನಾಯಕರು ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತೆರವಾದ ಮೂರು ವಿಧಾನ ಪರಿಷತ್‌ ಸದಸ್ಯ ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಲಿದೆ.

ಈಗಾಗಲೇ ಕಾಂಗ್ರೆಸ್‌ನಲ್ಲಿ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆದಿದ್ದು, ವಿಧಾನಸಭೆ ಚುನಾವಣೆಯ ಬಳಿಕ ಮೂರು ಸ್ಥಾನಗಳು ಆಡಳಿತ ಪಕ್ಷ ಕಾಂಗ್ರೆಸ್‌ ನ ಪಾಲಾಗಲಿವೆ. ಈಗಾಗಲೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ವಿಧಾನಸಭೆ ಚುನಾವಣೆಯ ಟಿಕೆಟ್‌ ವಂಚಿತರು, ಹಿರಿಯ ನಾಯಕರು, ಮಹಿಳಾ ನಾಯಕರು ಈ ಸ್ಥಾನಕ್ಕಾಗಿ ಲಾಬಿ ನಡೆಸಿದ್ರು. ಆದರೆ, ಕಾಂಗ್ರೆಸ್‌ ಪಾಳಯದಲ್ಲಿ ನಡೆದ ಚರ್ಚೆಯ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್‌ ಅವರಿಗೆ ಸದಸ್ಯ ಸ್ಥಾನ ಒಲಿದು ಬಂದಿತ್ತು.

Jagadish Shettar Unanimously Elected To Karnataka Legislative Council

ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಗೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್‌ ಅವಕಾಶವನ್ನ ಕಲ್ಪಿಸಿಕೊಟ್ಟಿತ್ತು. ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್‌ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ, ಬಿಜೆಪಿಯಿಂದ ಮತ್ತು ಜೆಡಿಎಸ್‌ನಿಂದ ಯಾರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣದಿಂದಾಗಿ ಕಾಂಗ್ರೆಸ್‌ ನ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿತ್ತು. ಜೂನ್ 30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿತ್ತು. ಆದರೆ ಬಿಜೆಪಿ ಹಾಗೂ ಜೆಡಿಎಸ್‌ ನಿಂದ ಯಾರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ಅವಿರೋಧವಾಗಿ ಕಾಂಗ್ರೆಸ್‌ ನ ಮೂವರು ಆಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆ ನಡೆದಿದೆ.

ಇನ್ನೂ ಅವಿರೋಧವಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಯ್ಕೆಯಾ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಶುಕ್ರವಾರ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು. ಒಟ್ನಲಿ ಸದ್ಯಕ್ಕೆ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ 24, ಬಿಜೆಪಿ 34 ಹಾಗೂ ಜೆಡಿಎಸ್ 8 ಸ್ಥಾನವನ್ನು ಹೊಂದಿದೆ. ಒಂದು ಪಕ್ಷೇತರ ಸದಸ್ಯ ಇದ್ದಾರೆ.

English summary

Karnataka MLC Elections: karnataka legislative council election three congress candidates including jagadish shettar won unopposed.

Story first published: Saturday, June 24, 2023, 7:36 [IST]

Source link