Karnataka Monsoon: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮುಂಗಾರು ಚರುಕು, ಇಲ್ಲಿದೆ ವಿವರ | Karnataka Monsoon: Heavy rainfall forecast in many districts of state on June 25

Karnataka

oi-Madhusudhan KR

|

Google Oneindia Kannada News

ಕರ್ನಾಟಕ, ಜೂನ್‌, 25: ಈ ಬಾರಿ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದ್ದೇ ತಡವಾಗಿ. ಅದರಲ್ಲೂ ಕೆಲವೆಡೆ ಅಬ್ಬರದ ಮಳೆಯಾಗಿದ್ದರೆ, ಇನ್ನೂ ಹಲವೆಡೆ ಮಳೆಯೇ ಇಲ್ಲದಂತಾಗಿದೆ. ಹಾಗೆಯೇ ಇಂದು (ಜೂನ್‌ 25) ಬುಧವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಾದರೆ ಯಾವ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ವಿವರವವನ್ನು ಇಲ್ಲಿ ತಿಳಿಯಿರಿ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ (ಜೂನ್‌ 24) ಬೆಳಗ್ಗೆಯಿಂದ ಮಧ್ಯಾಹ್ನ 12 ಗಂಟೆಯವರೆಗೂ ಮೋಡ ಮುಚ್ಚಿದ ವಾತಾವರಣ ಇದ್ದು, ಬಳಿಕ ದೀಢಿರನೇ ಬಿಸಿಲಿನ ಧಗೆ ಮುಂದುವರೆದಿತ್ತು. ಆದರೂ ರಾತ್ರಿ ವೇಳೆಗೆ ನಗರದ ಹಲವೆಡೆ ಜಿನುಗು ಮಳೆಯಾಗಿ ರಸ್ತೆಗಳ ಮೇಲೆ ಸ್ವಲ್ಪ ಮಟ್ಟಿಗೆ ನೀರು ಹರಿದಿತ್ತು. ಹಾಗೆಯೇ ಇಂದು ಬೆಳಗ್ಗೆಯಿಂದ ಬಿಸಿಲು ಮುಂದುವರೆದಿದ್ದು, ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Monsoon: Heavy rainfall forecast in many districts of state on June 25

ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಜೂನ್ 27ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಜೂನ್ 27ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ

ಮತ್ತೊಂದೆಡೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು ಪಡೆದಿದ್ದು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ. ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಮಳೆಯ ಅಬ್ಬರ ಹೆಚ್ಚಾಗಿದೆ. ಅಲ್ಲದೆ ನಿನ್ನೆ ಕಾರವಾರ ಮತ್ತು ಹೊನ್ನಾವರದಲ್ಲಿ ಭಾರೀ ಮಳೆ ಬಿದ್ದಿದೆ.

ಇನ್ನು ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಗೇರುಸೊಪ್ಪ, ಪಣಂಬೂರು, ಕೋಟ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಕದ್ರಾ, ಕಾರ್ಕಳ, ಕೊಲ್ಲೂರು, ಲಿಂಗನಮಕ್ಕಿ, ಮಂಗಳೂರು, ಉಡುಪಿ, ಮುಲ್ಕಿ, ಸುಳ್ಯ, ಸುಬ್ರಹ್ಮಣ್ಯ, ತಾಳಗುಪ್ಪ, ಬನವಾಸಿ, ಮಾಣಿ, ಯಲ್ಲಾಪುರ, ಕೊಟ್ಟಿಗೆಹಾರ, ಮಂಚಿಕೇರಿ, ಔರಾದ್, ಭಾಲ್ಕಿ, ಸಕಲೇಶಪುರ, ಮೈಸೂರು, ಕಳಸ, ತುಮಕೂರು ಸೇರಿದಂತೆ ಇನ್ನಿತರ ಕಡೆ ಭಾರೀ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ಕಿಲೋ ಮೀಟರ್‌ನಿಂದ 55 ಕಿಲೋ ಮೀಟರ್‌ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೆಶವನ್ನು ರವಾನಿಸಲಾಗಿದೆ. ಮತ್ತೊಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ವಾತಾರಣ ಮುಂದುವರೆದಿದ್ದು, ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಹಾಗೆಯೇ ನಿನ್ನೆ ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೆಯೇ ನಗರದ ಹಲವೆಡೆ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ ನ್ನುವ ಮಾಹಿತಿಯನ್ನು ನೀಡಿದೆ.

ಒಟ್ಟಿನಲ್ಲಿ ಹೇಳುವುದಾದರೆ ರಾಜ್ಯದ ಹಲವೆಡೆ ಅಬ್ಬರದ ಮಳೆಯಾಗುತ್ತಲೇ ಇದ್ದು, ಮತ್ತೆ ಕೆಲವೆಡೆ ಮಳೆಯಿಲ್ಲದೆ ಅನ್ನದಾತರು ಮೋಡದ ಕಡೆ ಮುಖ ಮಾಡಿ ಕುಳಿತುಕೊಳ್ಳುವಂತಾಗಿದೆ. ಅಲ್ಲದೆ ಈಗಾಗಲೇ ಕೆಲವು ಕಡೆ ಬೇಸಿಗೆ ಬೆಳೆಗಳನ್ನು ಬೆಳೆದ ರೈತರು ಮಳೆ ಇಲ್ಲದೆ ಕಂಗಾಲಾಗಿ ಹೋಗಿದ್ದಾರೆ. ಅದರಲ್ಲೂ ಈಗಾಗಲೇ ಬಿಪರ್‌ಜಾಯ್‌ ಚಂಡಮಾರುತದ ಅಬ್ಬರದಿಂದ ಕರಾವಳಿ ಭಾಗದ ಜನರು ತತ್ತರಿಸಿ ಹೋಗಿದ್ದಾರೆ. ಹಾಗೆಯೇ ಮತ್ತೊಂದೆಡೆ ಬಯಲು ಸೀಮೆಯಂತಹ ಭಾಗದಲ್ಲಿ ಅನ್ನದಾತರು ವಿಶೇಷ ಪೂಜೆಗಳನ್ನು ಮಾಡುತ್ತಾ ಮಳೆಗಾಗಿ ಹಂಬಲಿಸುತ್ತಿದ್ದಾರೆ.

English summary

Karnataka Monsoon: Heavy rainfall forecast in many districts of Karnataka state on June 25, here see details

Story first published: Sunday, June 25, 2023, 10:03 [IST]

Source link