Karnataka Monsoon: ಮುಂದಿನ 5 ದಿನಗಳ ಕಾಲ ಮಳೆ ಕಂಟಿನ್ಯೂ, ರಾಜ್ಯದ ಈ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಣೆ | Karnataka Monsoon: Heavy rainfall forecast in many districts of state for next 5 days from June 20

Karnataka

oi-Madhusudhan KR

|

Google Oneindia Kannada News

ಕರ್ನಾಟಕ, ಜೂನ್‌, 20: ರಾಜ್ಯದ ಕರಾವಳಿ ಭಾಗದಲ್ಲಿ ಈಗಾಗಲೇ ಮುಂಗಾರು ಮಳೆ ದೊಡ್ಡ ದೊಡ್ಡ ಅವಾಂತರಗಳನ್ನೆ ಸೃಷ್ಟಿಸಿದೆ. ಮತ್ತೊಂದೆಡೆ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಇಂದಿನಿಂದದ (ಮಂಗಳವಾರ ಜೂನ್‌ 20) ಆರಂಭವಾಗಿದೆ. ಅದೇ ರೀತಿ ಇನ್ನೂ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯಲೋ ಅಲರ್ಟ್‌ ಅನ್ನು ಸಹ ಘೋಷಣೆ ಮಾಡಲಾಗಿದೆ.

ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೂ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಇದೀಗ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಇಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕರಾವಳಿ ಜಿಲ್ಲೆಯಲ್ಲಿ ಮುಂಗಾರು ತೀವ್ರತೆ ಪಡೆಯಲಿದೆ ಅಂತಲೂ ಮಾಹಿತಿಯನ್ನು ರವಾನಿಸಿದೆ.

Karnataka Monsoon: Heavy rainfall forecast in many districts of state for next 5 days from June 20

ರಾಜ್ಯದ ಹಲವೆಡೆ ಇನ್ನು 5 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ (ಜೂನ್‌ 20) ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಇಲ್ಲಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದೆ.

Monsoon Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 5 ದಿನಗಳ ಕಾಲ ವರುಣಾರ್ಭಟ, ಇಲ್ಲಿದೆ ವಿವರMonsoon Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 5 ದಿನಗಳ ಕಾಲ ವರುಣಾರ್ಭಟ, ಇಲ್ಲಿದೆ ವಿವರ

ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಳ ಧಾರಾಕಾರ ಮಳೆ ಸುರಿಯುವ ಸಂಭವವಿದ್ದು, ಇಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೂ ಮಳೆರಾಯ ಆರ್ಭಟವನ್ನು ಶರು ಮಾಡಿದ್ದಾನೆ.

ಯಾವ್ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ?

ಸಿಲಿಕಾನ್‌ ಸಿಟಿ ಬೆಂಗಳೂರು ಮಾತ್ರ ಅಲ್ಲದೆ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇಂದು ಭಾರೀ ಮಳೆ ಬಿದ್ದಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ 25ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸೇರಿದಂತೆ ದವಸ, ಧಾನ್ಯಗಳು ಸಹ ನೀರು ಪಾಲಾಗಿವೆ. ಇನ್ನು ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಜನ ಹರಸಾಹಸಪಟ್ಟಿದ್ದಾರೆ.

ಹಾಸನ ಮತ್ತು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಚಿಕ್ಕಮಗಳೂರು ನಗರ, ಸಖರಾಯಪಟ್ಟಣ, ಉದ್ದೇಬೋರಹಳ್ಳಿಯಲ್ಲಿ ಕಳೆದೊಂದು ಗಂಟೆಯಿಂದಲೂ ಭಾರೀ ಮಳೆ ಸುರಿದಿದ್ದು, ಇಲ್ಲಿನ ರಸ್ತೆಗಳೆಲ್ಲ ಕೆರೆಯಂತಾಗಿ ಮಾರ್ಪಟ್ಟಿವೆ. ಇದರಿಂದ ವಾಹನ ಸವಾರರು ಮುಂದಕ್ಕೂ ಹೋಗದೆ, ಹಿಂದಕ್ಕೂ ಬಾರದೆ ನಡುರಸ್ತೆಯಲ್ಲೇ ಪರದಾಡಿದ ಘಟನೆಗಳು ನಡೆದಿವೆ. ಮತ್ತೊಂದೆಡೆ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಈ ಪ್ರದೇಶಗಳಲ್ಲಿ ಕೆಲವೇ ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ, ಎಲ್ಲೆಲ್ಲಿ?

ಹಾಗೆಯೇ ಹಾಸನ ಜಿಲ್ಲೆಯ ಹಲವೆಡೆ ಕಳೆದ 3 ಗಂಟೆಯಿಂದ ಭಾರೀ ಮಳೆಯಾಗಿದ್ದು, ಪರಿಣಾಮ ರಸ್ತೆ‌ಗಳೆಲ್ಲ ಕೆರೆಯಂತಾಗಿ ವಾಹನಗಳು ನೀರಲ್ಲಿ ಕೊಚ್ಚಿಕೊಂಡುಹೋದ ಘಟನೆಗಳು ನಡೆದಿವೆ. ಅಲ್ಲದೆ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕೂಡ ಪರದಾಡಿದ್ದಾರೆ. ಇನ್ನು ಕೆಲವು ಕಡೆ ಚರಂಡಿಗಳು ತುಂಬಿ ಹರಿಯುತ್ತಿದ್ದು, ಇದರಿಂದ ನಗರ ಪ್ರದೇಶದ ಸ್ಲಂಗಳಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಒಟ್ಟಿನಲ್ಲಿ ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಇಂದು ವರುಣನ ತಂಪೆರೆದಿದ್ದಾನೆ ಎನ್ನಲಾಗಿದೆ.

ಗಡಿ ಜಿಲ್ಲೆಯಲ್ಲೂ ಮಳೆ ಆರ್ಭಟ

ಗಡಿ ಜಿಲ್ಲೆಯಾದ ಚಾಮರಾಜನಗರದ ಹಲವೆಡೆವೂ ಕೂಡ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದಿನಿಂದ ಮುಂಗಾರು ಚುರುಕುಗೊಂಡಿದ್ದು, ಕಾದ ಹಂಚಿನಂತಾಗಿದ್ದ ಭೂಮಿ ಇದೀಗ ಸದ್ಯ ತಂಪಾಗಿದೆ. ಕಳೆದ ಜೂನ್‌ 9ರಂದೇ ಚಾಮರಾಜನಗರ ಮೂಲಕ ರಾಜ್ಯ ಪ್ರವೇಶ ಮಾಡಿತ್ತು. ಆದರೆ ಮುಂಗಾರು ಬಿಪರ್‌ಜಾಯ್ ಚಂಡಮಾರುತದ ಪರಿಣಾಮ ಮುಂಗಾರು ಪ್ರವೇಶ ಮಾಡಿದ್ದರೂ ಚುರುಕುಗೊಂಡಿರಲಿಲ್ಲ.

ಆದರೆ ಇದೀಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಈಗಾಗಲೇ ಇಲ್ಲಿನ ಸಾಕಷ್ಟು ಬೆಳೆಗಳು ಒಣಗಿ ಹೋಗಿದ್ದು, ಬಹುಪಾಲು ಮಂದಿ ರೈತರಿಗೆ ಈ ಮಳೆ ಉಪಯೋಗ ಆಗಲ್ಲ ಎನ್ನಲಾಗುತ್ತಿದೆ. ಮತ್ತೊಂದೆಡೆ ಕೆಲವು ರೈತರು ಬೇಸಿಗೆ ಬೆಳೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಹಾಗೆಯೇ ತಮಿಳುನಾಡಿನ ಭಾಗದಲ್ಲಿ ಸುಳಿಗಾಳಿ ಸೃಷ್ಟಿ ಮತ್ತು ಬಿಪರ್​​ಜಾಯ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಆಗಿದೆ. ಹಾಗೆತೇ ಕೇರಳ ಮತ್ತು ಕರಾವಳಿ ಭಾಗದಲ್ಲಿ ಸುಳಿಗಾಳಿಯೂ ಈ ಮಳೆಗೆ ಕಾರಣವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದ ಬುಧವಾರದಿಂದಲೂ (ಜೂನ್‌ 21) ರಾಜ್ಯದ ಹಲವು‌ ಭಾಗಗಳ್ಲಿ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ತಿಳಿಸಿದೆ.
ಜೂನ್ 24ರಂದು ಕರಾವಳಿಯಲ್ಲಿ ಭಾರೀ‌ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಭಾಗದಲ್ಲಿ ಯೆಲ್ಲೋ ಆಲರ್ಟ್ ಸಹ ಘೋಷಣೆ ಮಾಡಲಾಗಿದೆ.

English summary

Karnataka Monsoon: Heavy rainfall forecast in many districts of Karnataka state for next 5 days from June 20, Yellow alert announced for coastal districts,

Story first published: Tuesday, June 20, 2023, 20:15 [IST]

Source link