Karnataka
oi-Naveen Kumar N
ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ವರುಣನ ಕೃಪೆ ಸಿಕ್ಕಿದ್ದು ಮುಂದಿನ ಒಂದು ವಾರಗಳ ಉತ್ತಮ ಮಳೆಯಾಗಲಿದೆ. ಜುಲೈ 2ರವರೆಗೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ನಂತರ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
ಜೂನ್ 30, ಶುಕ್ರವಾರ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ 114.5 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಶುಕ್ರವಾರ, ಶನಿವಾರ ಕೂಡ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಉತ್ತಮ ಮಳೆಯಾಗಲಿದೆ.
ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಉತ್ತಮ ಮಳೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಚದುರಿದ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 2ರವರೆಗೂ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ನಂತರದ ಒಂದು ವಾರ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.
ಉತ್ತರ ಒಳನಾಡಿನಲ್ಲೂ ಅತ್ಯುತ್ತಮ ಮಳೆ ಸಾಧ್ಯತೆ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಚದರಿದಂತೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕ ಕರಾವಳಿಯಲ್ಲಿ 10 ದಿನ ಭಾರೀ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
ಬೆಂಗಳೂರು ಹವಾಮಾನ ಹೇಗಿರುತ್ತೆ?
ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಹದೇವಪುರ, ದಾಸರಹಳ್ಳಿ, ಯಲಹಂಕ, ಬಿಬಿಎಂಪಿ ಉತ್ತರ, ಬಿಬಿಎಂಪಿ ದಕ್ಷಿಣ, ಬಿಬಿಎಂಪಿ ಪಶ್ಚಿಮ, ಬೆಂಗಳೂರು ಪೂರ್ವ ವಲಯಗಳಲ್ಲಿ ಅಲ್ಲಲ್ಲಿ ಚದುರಿದಂತೆ ಲಘು ಮಳೆಯಾಗಲಿದೆ. ರಾಜರಾಜೇಶ್ವರಿ ನಗರ ವಲಯ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
English summary
The IMD predicts that coastal and Malnad districts in Karnataka will experience very heavy rainfall for the next week. Meanwhile, moderate rainfall is expected in the south and north interior parts of the state.
Story first published: Friday, June 30, 2023, 14:59 [IST]