Karnataka Rain: ಇಂದು ಸಂಜೆ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ | Karnataka Rain: Thunderstorm Alert For Bengaluru, Tumkuru And Many Districts

Karnataka

oi-Naveen Kumar N

|

Google Oneindia Kannada News

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಎಚ್ಚರಿಕೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಜಿಟಿ ಜಿಟಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain: Thunderstorm Alert For Bengaluru, Tumkuru And Many Districts

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

 Karnataka Rain: ಮೂರು ದಿನ ಮಳೆ ಕಡಿಮೆ: ನಂತರ ಈ ಜಿಲ್ಲೆಗಳಲ್ಲಿ ಭಾರಿ ಮಳೆ Karnataka Rain: ಮೂರು ದಿನ ಮಳೆ ಕಡಿಮೆ: ನಂತರ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರಿನಲ್ಲಿ ದಿನವಿಡೀ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಇಡೀ ದಿನ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ನಗರದ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದ ನಂತರ ಅಲ್ಲಲ್ಲಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿಡುಗಾಳಿ ಸಹಿತ ಮಳೆಯಾಗಲಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವು ನದಿಗಳು ಉಕ್ಕಿಹರಿಯುತ್ತಿವೆ.

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಕೂಡ ಸೋಮವಾರ ಸಂಜೆಯಿಂದ ರಾತ್ರಿಯವೆರೆಗೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕೊಡಗು, ಮಡಿಕೇರಿ, ಮೈಸೂರು ಭಾಗದಲ್ಲಿ ಮಳೆಯಾಗುತ್ತಿದ್ದು ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದೆ. ಭಾಗಮಂಡಲ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅಬ್ಬೆ ಫಾಲ್ಸ್ ಸೇರಿದಂತೆ ಹಲವು ಜಲಪಾತಗಳಿಗೆ ಜೀವಕಳೆ ಬಂದಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಜುಲೈ 16ರವರೆಗೆ ಭಾರಿ ಮಳೆ

ಜುಲೈ 15ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

English summary

Karnataka Rain: The Karnataka State Natural Disaster Monitoring Centre has issued a thunderstorm alert for Bengaluru, Tumkuru, and several other districts on Monday evening and night.

Source link