ದಕ್ಷಿಣ ಒಳನಾಡಿನ ಕಾವೇರಿ ಮತ್ತು ಬಯಲುಸೀಮೆ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ 9ರವರೆಗೆ ನಿರಂತರವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಡೀ ಪ್ರದೇಶದಲ್ಲಿ ದಾವಣಗೆರೆ, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದೆ. ಒಟ್ಟಾರೆಯಾಗಿ ಆಗಸ್ಟ್ 9ರ ತನಕ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ.














