Karnataka Rain: ಈ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ! | Karnataka Weather: Heavy Rain Expected In Many Districts

Karnataka

oi-Naveen Kumar N

|

Google Oneindia Kannada News

ರಾಜ್ಯದಲ್ಲಿ ಮುಂಗಾರು ಚುರುಕಾಗುವ ಲಕ್ಷಣ ಕಾಣಿಸುತ್ತಿದ್ದು, ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ವ್ಯಾಪಕ ಮಳೆ, ಹಾಗೂ ಕೆಲವು ಪ್ರದೇಶಗಳಲ್ಲಿ ಅಧಿಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rain Expected

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ತುಮಕೂರು, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಬೀಳುವ ಮುನ್ಸೂಚನೆ ಇದೆ.

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಹಾವೇರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಯಾದಗಿರಿ, ಗದಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಧಾರವಾಡ ಜಿಲ್ಲೆಯಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Heavy Rain Expected

ಬೆಂಗಳೂರು ಮಳೆ ಮುನ್ಸೂಚನೆ

ಬೆಂಗಳೂರು ನಗರದಲ್ಲಿ ಮಂಗಳವಾರ ಮುಂಜಾನೆ ಕೂಡ ಮೋಡ ಕವಿದ ವಾತಾವರಣ ಮುಂದುವರೆದಿದೆ. ಸೋಮವಾರ ಸಂಜೆ ನಗರದ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಮಂಗಳವಾರ ಕೂಡ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು ಸಂಜೆ ವೇಳೆಗೆ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ.

ಯಲಹಂಕ, ರಾಜ ರಾಜೇಶ್ವರಿ ನಗರ, ಬಿಬಿಎಂಪಿ ದಕ್ಷಿಣ ವಲಯ, ಬೆಂಗಳೂರು ಉತ್ತರ ವಲಯ, ಬೊಮ್ಮನಹಳ್ಳಿ ವಲಯದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಹದೇವಪುರ ಮತ್ತು ಬಿಬಿಎಂಪಿ ಪೂರ್ವ ವಲಯದಲ್ಲಿ ಮಳೆ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೈಕೊಟ್ಟ ಮುಂಗಾರು ರೈತರಲ್ಲಿ ಆತಂಕ

ಜೂನ್ ಮೊದಲ ವಾರವೇ ಉತ್ತಮ ಮಳೆ ಬೀಳಬೇಕಿತ್ತಾದರೂ, 3ನೇ ವಾರವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಇರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬಿತ್ತನೆ ಬೀಜ, ಗೊಬ್ಬರಗಳನ್ನು ಸಿದ್ದ ಮಾಡಿಟ್ಟುಕೊಂಡಿರುವ ರೈತರು ಆಕಾಶವನ್ನು ನೋಡುತ್ತಾ ಕಾಯುತ್ತಿದ್ದಾರೆ.

Monsoon Active in Benglauru: ಸೋಮವಾರ ಹಗುರ ಮಳೆ ದಾಖಲು, ಜೂನ್ 23ರವರೆಗೆ ಮಳೆ ಆಗಮನ Monsoon Active in Benglauru: ಸೋಮವಾರ ಹಗುರ ಮಳೆ ದಾಖಲು, ಜೂನ್ 23ರವರೆಗೆ ಮಳೆ ಆಗಮನ

ಬಿಪರ್ ಜಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಭಾನುವಾರ, ಸೋಮವಾರ ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು ರಾಜ್ಯದಲ್ಲಿ ಕೂಡ ಉತ್ತಮ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದೆ.

English summary

Many districts of Karnataka will receive heavy rain on June 20, while some districts have not received any rainfall. Coastal districts will witness moderate rain.

Story first published: Tuesday, June 20, 2023, 7:00 [IST]

Source link