Kavya Maran-Anirudh: ಅನಿರುದ್ಧ್-ಕಾವ್ಯಾ ಮಾರನ್ ಮದುವೆಗೆ ಮುಹೂರ್ತ ಫಿಕ್ಸ್ ಆಯ್ತಾ? ಕುಟುಂಬ ಸದ್ಯರ ಹೇಳಿಕೆ ಸಖತ್ ವೈರಲ್ | | ACTPnews

ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್


Last Updated:

ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ಹಿರಿಯ ನಟ ವೈ.ಜಿ. ಮಹೇಂದ್ರನ್, ಅನಿರುದ್ಧ್ ಶೀಘ್ರದಲ್ಲೇ ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್
ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್

ಕಾಲಿವುಡ್‌ನ ಜನಪ್ರಿಯ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ (Anirudh Ravichander) ಮತ್ತು ಐಪಿಎಲ್ ತಂಡ ಸನ್‌ರೈಸರ್ಸ್ ಹೈದರಾಬಾದ್‌ನ ಸಿಇಒ ಕಾವ್ಯಾ ಮಾರನ್ (Kavya Maran) ಅವರ ಮದುವೆ ಕುರಿತು ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಈ ಹಿಂದೆಯೇ ಹರಿದಾಡಿದ್ದವು. ಇದೀಗ ಅನಿರುದ್ಧ್ ಅವರ ಚಿಕ್ಕಪ್ಪ ಹಾಗೂ ಹಿರಿಯ ನಟ ವೈ.ಜಿ. ಮಹೇಂದ್ರನ್ ನೀಡಿರುವ ಹೇಳಿಕೆ ಈ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದ್ದು, ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದೆ.

ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ಹಿರಿಯ ನಟ ವೈ.ಜಿ. ಮಹೇಂದ್ರನ್, ಅನಿರುದ್ಧ್ ಶೀಘ್ರದಲ್ಲೇ ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಅನಿರುದ್ಧ್ ತುಂಬಾ ಸೌಮ್ಯ ಸ್ವಭಾವದ ಹುಡುಗ. ಅವನಿಗೆ ಶುಭಾಶಯ ಹೇಳಲು ಇದು ಸರಿಯಾದ ಸಮಯ. ಅವನು ಮದುವೆಗೆ ಸಜ್ಜಾಗಿದ್ದಾನೆ ಎಂದು ಅವರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂದರ್ಶನದಲ್ಲಿ ಇದು ಕೇವಲ ವದಂತಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವೈ.ಜಿ. ಮಹೇಂದ್ರನ್, ನನಗೆ ದೊರೆತಿರುವ ಮಾಹಿತಿಯ ಪ್ರಕಾರ ಈ ಸುದ್ದಿ ನಿಜ. ಇಬ್ಬರೂ ಮದುವೆಯಾಗಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿದ್ದರೂ, ಈ ಬಗ್ಗೆ ಇಬ್ಬರೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಕಾವ್ಯಾ ಮಾರನ್ ಯಾರು?

ಕಾವ್ಯಾ ಮಾರನ್, ಸನ್ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ಅವರ ಪುತ್ರಿ. ಅವರು ಸನ್ ಟಿವಿ ನೆಟ್‌ವರ್ಕ್‌ನಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್‌ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಆಡಳಿತ ಜವಾಬ್ದಾರಿಯನ್ನೂ ನೋಡಿಕೊಳ್ಳುತ್ತಿದ್ದಾರೆ. ಐಪಿಎಲ್ ಪಂದ್ಯಗಳ ವೇಳೆ ತಂಡವನ್ನು ಉತ್ಸಾಹದಿಂದ ಬೆಂಬಲಿಸುವ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ.

ಸಂಗೀತ ಲೋಕದ ಯಶಸ್ವಿ ಹೆಸರು ಅನಿರುದ್ಧ್

35 ವರ್ಷದ ಅನಿರುದ್ಧ್ ರವಿಚಂದರ್ ಭಾರತೀಯ ಚಿತ್ರರಂಗದ ಅತ್ಯಂತ ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರು. ವಿಕ್ರಂ, ಜೈಲರ್, ಲಿಯೋ, ಕೊಲಮಾವು ಕೋಕಿಲಾ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ.

ಅಧಿಕೃತ ಘೋಷಣೆಯತ್ತ ಎಲ್ಲರ ಚಿತ್ತ

ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ಮದುವೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದ್ದರೂ, ಈ ವಿಷಯದ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ಇದೀಗ ಅಭಿಮಾನಿಗಳು ಇಬ್ಬರ ಕಡೆಯಿಂದ ಅಧಿಕೃತ ಪ್ರಕಟಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed