Last Updated:
KEA ಅರ್ಜಿ ಸಲ್ಲಿಕೆ ಗಡುವನ್ನು ಸೆ.10ರವರೆಗೆ ವಿಸ್ತರಿಸಿದೆ. ಪರೀಕ್ಷಾ ಶುಲ್ಕ ಪಾವತಿಗೆ ಸೆ.11ರವರೆಗೆ ಅವಕಾಶವಿದೆ. ಹೊಸ ದಿನಾಂಕಗಳು ಮತ್ತು ಪ್ರಮುಖ ನಿಯಮಗಳು ಇಲ್ಲಿವೆ.
ಬೆಂಗಳೂರು: ಕರ್ನಾಟಕದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET 2026)ಕ್ಕೆ ಆನ್ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಸೆಪ್ಟೆಂಬರ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳಿಗೆ ಹೆಚ್ಚುವರಿ ಕಾಲಾವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 10ರ ಸಂಜೆ 5.30ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 11ರ ಬ್ಯಾಂಕಿಂಗ್ ಅವಧಿಯವರೆಗೆ ಅವಕಾಶ ನೀಡಲಾಗಿದೆ.














