Last Updated:
ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿರುವ 2027ರ ಏಕದಿನ ವಿಶ್ವಕಪ್ ದೃಷ್ಟಿಯಿಂದ ‘ಕೆಪಿ’ (KP) ಅವರ ಈ ನೇಮಕಾತಿಯನ್ನು ಅತ್ಯಂತ ಮಹತ್ವದ್ದು ಎಂದು ಪರಿಗಣಿಸಲಾಗಿದೆ.
ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ತಮ್ಮ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರಿಗೆ ವೈಟ್-ಬಾಲ್ (ODI and T20I) ಮಾದರಿಯ ವಿಶೇಷ ಮೆಂಟರ್ (Special Mentor) ಆಗಿ ನೇಮಕ ಮಾಡುವ ಮೂಲಕ ದೊಡ್ಡ ಜವಾಬ್ದಾರಿಯನ್ನು ನೀಡಿದೆ. 12 ವರ್ಷಗಳ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ, ಪೀಟರ್ಸನ್ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಜೊತೆ ಕೈಜೋಡಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿರುವ 2027ರ ಏಕದಿನ ವಿಶ್ವಕಪ್ ದೃಷ್ಟಿಯಿಂದ ‘ಕೆಪಿ’ (KP) ಅವರ ಈ ನೇಮಕಾತಿಯನ್ನು ಅತ್ಯಂತ ಮಹತ್ವದ್ದು ಎಂದು ಪರಿಗಣಿಸಲಾಗಿದೆ.














