Last Updated:
ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಿತಿ ಗಂಭೀರವಾಗಿದೆ, ಮತ್ತು ಅವರು ಸಾವಿನ ಅಂಚಿನಲ್ಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಖಮೇನಿ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಖಮೇನಿ ನಿಜವಾದ ಸ್ಥಿತಿ ಬಗ್ಗೆ ಅನುಮಾನ ಹೆಚ್ಚಾಗಿದೆ.
ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಅವರ ಸಾವಿನ ವದಂತಿಗಳು ಕೆಲವು ದಿನಗಳಿಂದ ವ್ಯಾಪಕವಾಗಿ ಹರಡುತ್ತಿವೆ. ಇರಾನ್ನ (Iran) ಶತ್ರುಗಳು ಖಮೇನಿ ಈಗ ಕೇವಲ ಹೆಸರಾಗಿ ಉಳಿದಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದರು. ಜನರಲ್ಲಿ ಖಮೇನಿ ಬದುಕಿರುವ ಬಗ್ಗೆ ಗೊಂದಲ ಮತ್ತು ಊಹಾಪೋಹಗಳು ಹೆಚ್ಚಾಗಿದ್ದವು. ಆದರೆ ಇದೀಗ ಇದ್ದಕ್ಕಿದ್ದಂತೆ ಒಂದು ವೀಡಿಯೊ ಕಾಣಿಸಿಕೊಂಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.














