LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ | ACTPnews

LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ


ಇಂದಿನ ಪಂದ್ಯವನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 15 ಅಂಕಗಳನ್ನು ಹೊಂದಿರುತ್ತದೆ. ಆ ನಂತರ ನಾಳೆ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಮಾತ್ರ ಪಂಜಾಬ್​ ಪ್ಲೇ ಆಫ್ ಪ್ರವೇಶಿಸಬಹುದು.
ತಂಡಗಳಲ್ಲಿ ಬದಲಾವಣೆ

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬದಲಾವಣೆ ಮಾಡಿಕೊಂಡಿದೆ. ಮಾರ್ಕೊ ಯಾನ್ಸನ್​ ಹಾಗೂ ವೈಶಾಕ್ ವಿಜಯ್ ಕುಮಾರ್​ ತಂಡಕ್ಕೆ ಮರಳಿದ್ದಾರೆ. ಹರ್ಪ್ರೀತ್ ಬ್ರಾರ್ ಹಾಗೂ ಲಾಕಿ ಫರ್ಗ್ಯೂಸನ್​ ತಂಡದಿಂದ ಹೊರಗುಳಿದಿದ್ದಾರೆ.

ಲಖನೌ ಸೂಪರ್ ಜೈಂಟ್ಸ್ ತಂಡ ನಾಲ್ಕು ಬದಲಾವಣೆ ಮಾಡಿಕೊಂಡಿದೆ. ಮಿಚೆಲ್ ಮಾರ್ಷ್, ಶಹ್ಬಾಜ್ ಅಹ್ಮದ್​, ಮಯಾಂಕ್ ಯಾದವ್ ಹಾಗೂ ಆಕಾಶ್ ಸಿಂಗ್​​ ಹೊರಗುಳಿದಿದ್ದರೆ, ಅರ್ಷಿನ್ ಕುಲಕರ್ಣಿ, ಮುಕುಲ್ ಚೌಧರಿ, ಅರ್ಜುನ್ ತೆಂಡೂಲ್ಕರ್ ಹಾಗೂ ಮೊಹಮ್ಮದ್ ಶಮಿ ಪ್ಲೇಯಿಂಗ್ ಇಲೆವೆನ್​​ನಲ್ಲಿ ಅವಕಾಶ ಪಡೆದಿದ್ದಾರೆ. ಅರ್ಜುನ್​ಗೆ ಇದು ಈ ಆವೃತ್ತಿಯಲ್ಲಿ ಹಾಗೂ ಲಖನೌ ಪರ ಮೊದಲ ಪಂದ್ಯವಾಗಿದೆ.

ಹೆಡ್ ಟು ಹೆಡ್ ದಾಖಲೆ

ಪಂಜಾಬ್ ಕಿಂಗ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ನಡುವೆ ಒಟ್ಟು 7 ಪಂದ್ಯಗಳು ನಡೆದಿದ್ದು, ಈ ಪೈಕಿ ಪಂಜಾಬ್ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಲಖನೌ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬಾರಿ ಲಖನೌ ತಂಡವನ್ನು ಸೋಲಿಸಿದ್ದರೆ, ಲಖನೌ ಕೇವಲ ಒಮ್ಮೆ ಮಾತ್ರ ಗೆಲುವು ಸಾಧಿಸಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಲಖನೌ ಸೂಪರ್ ಜೈಂಟ್ಸ್: ಅರ್ಷಿನ್ ಕುಲಕರ್ಣಿ, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಅಬ್ದುಲ್ ಸಮದ್, ಆಯುಷ್ ಬದೋನಿ, ಮುಕುಲ್ ಚೌಧರಿ, ಅರ್ಜುನ್ ತೆಂಡೂಲ್ಕರ್, ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್, ಮೊಹ್ಶಿನ್ ಖಾನ್

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ (ನಾಯಕ), ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಸೂರ್ಯಾಂಶ್ ಶೆಡ್ಗೆ, ಅಜ್ಮತ್ವುಲ್ಲಾ ಒಮರ್ಝೈ, ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಮಾರ್ಕೊ ಯಾನ್ಸನ್​, ಅರ್ಷದೀಪ್​ ಸಿಂಗ್, ಯುಜ್ವೇಂದ್ರ ಚಾಹಲ್, ವಿಜಯ್ ಕುಮಾರ್ ವೈಶಾಕ್

ಇಂಪ್ಯಾಕ್ಟ್ ಸಬ್​ಸ್ಟಿಟ್ಯೂಟ್ಸ್

ಲಖನೌ ಸೂಪರ್ ಜೈಂಟ್ಸ್: ಹಿಮ್ಮತ್ ಸಿಂಗ್, ದಿಗ್ವೇಶ್ ಸಿಂಗ್ ರಥಿ, ಮೈಮರನ್ ಸಿದ್ಧಾರ್ಥ್, ಆಕಾಶ್ ಸಿಂಗ್, ಶಹಬಾಜ್ ಅಹ್ಮದ್

ಪಂಜಾಬ್ ಕಿಂಗ್ಸ್: ವಿಷ್ಣು ವಿನೋದ್, ಮಾರ್ಕಸ್ ಸ್ಟೊಯಿನಿಸ್, ಹರ್‌ಪ್ರೀತ್ ಬ್ರಾರ್, ಕ್ಸೇವಿಯರ್ ಬಾರ್ಟ್ಲೆಟ್, ಪ್ರವೀಣ್ ದುಬೆ



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed