Lucknow Fire Accident: ಕೋಚಿಂಗ್ ಸೆಂಟರ್ ಅಗ್ನಿ ದುರಂತದಲ್ಲಿ 14 ಮಂದಿ ಸಜೀವ ದಹನ! 3 ಅಂತಸ್ತಿನ ಕಟ್ಟಡದಲ್ಲಿ ಸಿಲುಕಿ ಹಲವರ ಪರದಾಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಕೋಚಿಂಗ್‌ ಸೆಂಟರ್‌ಗೆ ಬೆಂಕಿ


Last Updated:

Lucknow Coaching Fire Accident:ಲಖನೌನ ಅಲಿಗಂಜ್​ನಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ದೇಶವನ್ನೇ ನಡುಗಿಸಿದೆ. ಸಾಕುಪ್ರಾಣಿ ಅಂಗಡಿ ಮತ್ತು ಅನಿಮೇಷನ್ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವೊಂದರಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಭಾರಿ ಬೆಂಕಿಗೆ ಕನಿಷ್ಠ 14 ಜನರು ಬಲಿಯಾಗಿದ್ದಾರೆ.

ಕೋಚಿಂಗ್‌ ಸೆಂಟರ್‌ಗೆ ಬೆಂಕಿ
ಕೋಚಿಂಗ್‌ ಸೆಂಟರ್‌ಗೆ ಬೆಂಕಿ

ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಖನೌನ (Lucknow) ಅಲಿಗಂಜ್ (Aliganj) ಪ್ರಾಂತ್ಯದ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ (Fire Accident) ಇಡೀ ದೇಶವನ್ನೇ ನಡುಗಿಸಿದೆ. ಪೆಟ್​ ಶಾಪ್​ ಮತ್ತು ಅನಿಮೇಷನ್ ಕೋಚಿಂಗ್ ಸೆಂಟರ್ (Animation Coaching Center) ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವೊಂದರಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಭಾರಿ ಬೆಂಕಿಗೆ ಕನಿಷ್ಠ 14 ಜನರು ಬಲಿಯಾಗಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದ್ದು, ಘಟನಾ ಸ್ಥಳದಲ್ಲಿ ಬೃಹತ್ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಘಟನೆಗೆ ಕಾರಣವೇನು?

ಕೋಚಿಂಗ್ ಸೆಂಟರ್ ಅಗ್ನಿ ದುರಂತಕ್ಕೆ ಪ್ರಾಥಮಿಕವಾಗಿ ಘಟನೆಗೆ ಶಾರ್ಟ್ ಸರ್ಕ್ಯೂಟ್ ಶಂಕೆ ವ್ಯಕ್ತಪಡಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೂರು ಅಂತಸ್ತಿನ ಈ ಕಟ್ಟಡದ ಕೆಳಮಹಡಿಯಲ್ಲಿ ಅಥವಾ ವಿದ್ಯುತ್ ನಿಯಂತ್ರಣ ಮಂಡಳಿಯಲ್ಲಿ ಉಂಟಾದ ಭೀಕರ ಶಾರ್ಟ್ ಸರ್ಕ್ಯೂಟ್​ ಬೆಂಕಿ ಕಾಣಿಸಿಕೊಳ್ಳಲು ಪ್ರಮುಖ ಕಾರಣ ಎನ್ನಲಾಗಿದೆ. ಇದರೊಂದಿಗೆ, ಅನಿಮೇಷನ್ ಸೆಂಟರ್‌ನ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿ, ಅದು ಇಡೀ ಕಟ್ಟಡಕ್ಕೆ ತಕ್ಷಣವೇ ಹರಡಲು ಕಾರಣವಾಯಿತು ಎಂದು ವರದಿಯಾಗಿದೆ.

2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ದುಖಃ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿ, “ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಮುಂದುವರೆದು, ಪ್ರಧಾನ ಮಂತ್ರಿಗಳ ಕಚೇರಿಯು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರವನ್ನು ಘೋಷಿಸಿದ್ದು, “ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರ ನೀಡಲಾಗುವುದು” ಎಂದು ತಿಳಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed