Last Updated:
ಮಧ್ಯಪ್ರದೇಶದ (Madhya Pradesh) ರೇವಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಮಹಿಳೆ ಮತ್ತು ಆಕೆಯ ನವಜಾತ ಶಿಶು ಮೃತಪಟ್ಟಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.
ಮಧ್ಯಪ್ರದೇಶದ (Madhya Pradesh) ರೇವಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಮಹಿಳೆ ಮತ್ತು ಆಕೆಯ ನವಜಾತ ಶಿಶು ಮೃತಪಟ್ಟಿರುವ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಹೆರಿಗೆಗೂ ಕೆಲವೇ ಗಂಟೆಗಳ ಮೊದಲು ಮಹಿಳೆ ತನ್ನ ತಾಯಿಯ ಬಳಿ ಆಸ್ಪತ್ರೆಯಿಂದ ಕರೆದೊಯ್ಯುವಂತೆ ಗೋಗರೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಬೆನ್ನಲ್ಲೇ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಮಾಡಿದ್ದು, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.














