Last Updated:
ಸಮುದ್ರದಲ್ಲಿ ಆಟವಾಡುವಾಗ ಮುಳುಗಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
ಮಹಾರಾಷ್ಟ್ರ: ರಾಯಗಢ (Raigad) ಜಿಲ್ಲೆಯಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು (Students) ಸಮುದ್ರದಲ್ಲಿ (Beach) ಮುಳುಗಿ ಸಾವನ್ನಪ್ಪಿದ್ದಾರೆ. ದಿವ್ಯಾಗರ್ ಸಮುದ್ರ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಪುಣೆ ಜಿಲ್ಲೆಯ ಆಳಂದಿಯಿಂದ ಖಾಸಗಿ ಕೋಚಿಂಗ್ ಕ್ಲಾಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಆದರೆ, ಸಮುದ್ರದ ನೀರಿನ ಆಳ ಹಾಗೂ ಅಲೆಗಳ ಅಂದಾಜು ಸಿಗದ ಕಾರಣ ಈ ಘೋರ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ದಿವ್ಯಾಗರ್ ಸಮುದ್ರ ತೀರವು ರಾಯಗಢದ ಶ್ರೀವರ್ಧನ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಗುಂಪು ಪ್ರವಾಸಕ್ಕೆಂದು ಆಗಮಿಸಿದ್ದರು. ಸಮುದ್ರದಲ್ಲಿ ಆಟವಾಡುವಾಗ ಮುಳುಗಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸುಮಾರು 48 ಜನರು ಪ್ರವಾಸಕ್ಕೆಂದು ಆಗಮಿಸಿದ್ದರು. ಈ ಪೈಕಿ 25 ಹುಡುಗರು, 17 ಮಂದಿ ಹುಡುಗಿಯರು ಸೇರಿದಂತೆ 6 ಮಂದಿ ಶಿಕ್ಷಕರಿದ್ದರು.














