India
oi-Reshma P
ಮುಂಬೈ, ಜುಲೈ 01: ಮಹಾರಾಷ್ಟ್ರದಲ್ಲಿ ಶನಿವಾರ ಮುಂಜಾನೆ ಭೀಕರ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ಉಚಿತ ಚಿಕಿತ್ಸೆಯನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.
ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಬುಲ್ಧಾನದಲ್ಲಿ ಸಂಭವಿಸಿದ ಈ ದುರದೃಷ್ಟಕರ ಘಟನೆಯಲ್ಲಿ ಮೃತರು ಮತ್ತು ಅವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ.ಗಳ ಸಹಾಯವನ್ನು ಘೋಷಿಸಿದ್ದಾರೆ ಎಂದು ಸಿಎಂ ಕಚೇರಿಯ ಅಧಿಕೃತ ಹೇಳಿಕೆ ಮಾಹಿತಿ ತಿಳಿದು ಬಂದಿದೆ. ಹಲವರ ಸಾವಿಗೆ ಕಾರಣವಾದ ಅಪಘಾತದ ತನಿಖೆಗೂ ಸಿಎಂ ಆದೇಶಿಸಿದ್ದಾರೆ.
ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 26 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದವರಿಗೆ ತಕ್ಷಣದ ನೆರವು ನೀಡುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಸರ್ಕಾರಿ ವೆಚ್ಚದಲ್ಲಿ ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಅಪಘಾತದಿಂದ ಬದುಕುಳಿದ ಚಾಲಕ ಬಸ್ನಲ್ಲಿ ಟೈರ್ ಸಿಡಿದ ನಂತರ ಬೆಂಕಿ ಹೊತ್ತಿಕೊಂಡಿತು ಎಂದು ಹೇಳಿದ್ದಾರೆ. ಆದರೆ, ಅಪಘಾತಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಮೃದ್ಧಿ-ಮಹಾಮಾರ್ಗ್ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಗಿನ ಜಾವ 1:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಬೆಳಗಿನ ಜಾವ 1:30ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಟೈರ್ ಒಡೆದು ಬಸ್ನಲ್ಲಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ ಎಂದು ಚಾಲಕ ಹೇಳಿದ್ದಾರೆ. ನಂತರ ವಾಹನದ ಡೀಸೆಲ್ ಟ್ಯಾಂಕ್ಗೆ ತಗುಲಿದೆ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರಲ್ಲಿ 3 ಮಕ್ಕಳಿದ್ದು, ಉಳಿದವರು ವಯಸ್ಕರಾಗಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಪುಣೆಗೆ ತೆರಳುತ್ತಿದ್ದ ಬಸ್ನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು.
English summary
Maharashtra CM Eknath Shinde has announced an ex gratia of Rs 5 lakh to the next kin of the deceased and free treatment for those injured in the bus accident.
Story first published: Saturday, July 1, 2023, 11:15 [IST]