Last Updated:
ದ್ವೇಷ ಭಾಷಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಸರಣಿ ಸಮನ್ಸ್ಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ನ್ಯಾಯಾಲಯವು ತಕ್ಷಣದ ಬಂಧನ ವಾರಂಟ್ ಜಾರಿಗೊಳಿಸಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಮತ್ತೊಂದು ಭಾರಿ ರಾಜಕೀಯ ಹಿನ್ನಡೆಯಾಗಿದೆ. ದ್ವೇಷ ಭಾಷಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಸರಣಿ ಸಮನ್ಸ್ಗಳನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ನ್ಯಾಯಾಲಯವು ತಕ್ಷಣದ ಬಂಧನ ವಾರಂಟ್ (Arrest Warrant) ಜಾರಿಗೊಳಿಸಿ ಬುಧವಾರ (ಆಗಸ್ಟ್ 19, 2026) ಆದೇಶ ಹೊರಡಿಸಿದೆ. ಈ ವಾರಂಟ್ ಜಾರಿ ಪ್ರಕ್ರಿಯೆಯ ವರದಿಯನ್ನು ಆಗಸ್ಟ್ 28, 2026 ರ ಒಳಗಾಗಿ ತನಗೆ ಸಲ್ಲಿಸಬೇಕು ಎಂದು ನ್ಯಾಯಾಲಯವು ಕೃಷ್ಣನಗರ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.














