Mallikarjun Kharge: ಮಣಿಪುರದ ಬಗ್ಗೆ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಯ | Kharge demands ‘elaborate statement’ from PM Modi on Manipur in Parliament

India

oi-Reshma P

|

Google Oneindia Kannada News

ದೆಹಲಿ ಜುಲೈ 20: ಇಬ್ಬರು ಕುಕಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊದ ಬಗ್ಗೆ ರಾಷ್ಟ್ರೀಯ ಆಕ್ರೋಶದ ನಡುವೆಯೇ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಗುರುವಾರ ಸಂಸತ್ತಿನಲ್ಲಿ ಮೋದಿ ಸಂಸತ್​​ನಲ್ಲಿ ಈ ಬಗ್ಗೆ ವಿಸ್ತೃತ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿದೆ, ಮಹಿಳೆಯರ ಮೇಲೆ ಅತ್ಯಾಚಾರ, ಬೆತ್ತಲೆ ಮೆರವಣಿಗೆ, ಭೀಕರ ಹಿಂಸಾಚಾರ ನಡೆಯುತ್ತಿದೆ. ಆದರೆ ದೇಶದ ಪ್ರಧಾನಿ ಮೋದಿಯವರು ಇವತ್ತಿನವರೆಗೂ ಮೌನವಾಗಿದ್ದರು. ಸಂಸತ್ತಿನ ಹೊರಗೆ ಮಾತ್ರ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆಯವರು ಮಾತನಾಡಿದ್ದಾರೆ.

 Mallikarjun Kharge Fierce

ಇನ್ನೂ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕೂಡಲೇ ರಾಜೀನಾಮೆ ನೀಡಬೇಕು. ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್‌ ಖರ್ಗೆ ಒತ್ತಾಯಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಮಣಿಪುರ ಹಿಂಸಾಚಾರದ ಬಗ್ಗೆ ಗದ್ದಲದೊಂದಿಗೆ ಪ್ರಾರಂಭವಾಯಿತು, ಉಭಯ ಸದನಗಳನ್ನು ಸೋಮವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಸಮಾವೇಶಗೊಳ್ಳುತ್ತಿದ್ದಂತೆ ಹಲವು ವಿರೋಧ ಪಕ್ಷದ ನಾಯಕರು ‘ಮಣಿಪುರ ಮಣಿಪುರ’ ಮತ್ತು ‘ಮಣಿಪುರ ಉರಿಯುತ್ತಿದೆ’ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ಮಣಿಪುರ ಘಟನೆ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು?

ಇನ್ನೂ ಸಂಸತ್ ಅಧಿವೇಶನದ ಮೊದಲು, ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರು ಮಾತನಾಡಿ, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಆಘಾತಕಾರಿ ವಿಡಿಯೋ ವಿಚಾರದಲ್ಲಿ ತಮ್ಮ ಹೃದಯ ನೋವಿನಿಂದ ತುಂಬಿಕೊಂಡಿದೆ ಎಂದು ಪ್ರಧಾನಿ ಹೇಳಿದ್ದಾರೆ.ಮಣಿಪುರದ ಹೆಣ್ಣುಮಕ್ಕಳಿಗೆ ಆಗಿರುವುದನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ.

ವಿಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ಆತಂಕ, ಹೀಗಾಗಿ ನಾಳೆ ಸಭೆ ಕರೆದಿದೆ ಎಂದ ಮಲ್ಲಿಕಾರ್ಜುನ ಖರ್ಗೆವಿಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ಆತಂಕ, ಹೀಗಾಗಿ ನಾಳೆ ಸಭೆ ಕರೆದಿದೆ ಎಂದ ಮಲ್ಲಿಕಾರ್ಜುನ ಖರ್ಗೆ

ಈ ಘಟನೆಯು ದೇಶಕ್ಕೆ ಅವಮಾನಕರ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ”ಮಣಿಪುರದ ಘಟನೆಯು ಯಾವುದೇ ಯೋಗ್ಯ ಸಮಾಜದಕ್ಕೆ ನಾಚಿಕೆಗೇಡಿನ ಸಂಗತಿ. ಪ್ರಜಾಪ್ರಭುತ್ವದ ಈ ದೇಗುಲದ ಪಕ್ಕದಲ್ಲಿ ನಿಂತಿರುವ ನನ್ನ ಹೃದಯವು ನೋವು ಹಾಗೂ ಆಕ್ರೋಶದಿಂದ ತುಂಬಿಕೊಂಡಿದೆ. ಮಣಿಪುರದ ಘಟನೆಯು ಯಾವುದೇ ನಾಗರಿಕ ಸಮಾಜಕ್ಕೆ ಅವಮಾನಕರ.

ಇದು ನಮ್ಮ ದೇಶಕ್ಕೆ ನಾಚಿಕೆಗೇಡನ್ನುಂಟು ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರವೇ ಆಗಿರಲಿ. ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ

ಮೇ 4 ರಂದು ಇಬ್ಬರು ಮಹಿಳೆಯರನ್ನು ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಪ್ರಕರಣದಡಿ ಈಗಾಗಲೇ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

English summary

Congress President Mallikarjun Kharge demanded an elaborate statement from PM Modi in Parliament over Manipur violence

Story first published: Thursday, July 20, 2023, 21:50 [IST]

Source link