Mob Assault: ಗ್ರಾಮಸ್ಥರು ವಿಧಿಸಿದ್ದ ಮದ್ಯ ನಿಷೇಧ ಉಲ್ಲಂಘನೆ, ಯುವಕನನ್ನು ಮರಕ್ಕೆ ತಲೆಕೆಳಗೆ ಕಟ್ಟಿಹಾಕಿ ಹಲ್ಲೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಮೇ ತಿಂಗಳಲ್ಲಿ ನಡೆದ ಈ ಘಟನೆ, ಸಾಯಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ಕೃತ್ಯ ಬೆಳಕಿಗೆ ಬಂದಿದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕಾರ್ಯಪ್ರವೃತ್ತರಾಗಿ ತನಿಖೆ ಆರಂಭಿಸಿದರು.

News18
News18

ಉದಯಪುರ: ಗ್ರಾಮದಲ್ಲಿ ಹೇರಲಾಗಿದ್ದ ಮದ್ಯ ನಿಷೇಧ ನಿಯಮವನ್ನು (Alcohol Prohibition) ಉಲ್ಲಂಘಿಸಿದ ಆರೋಪದ ಮೇಲೆ ಯುವಕನೊಬ್ಬನಿಗೆ ಗ್ರಾಮಸ್ಥರು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ (Mob Assault) ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಕಮೋಲ್ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ಮದ್ಯ ನಿಷೇಧವನ್ನು ಉಲ್ಲಂಘಿಸಿದ ಆರೋಪದ ಮೇಲೆ ಗ್ರಾಮಸ್ಥರು ಯುವಕನೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ, ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ಆತನಿಗೆ 11,000 ರೂ. ದಂಡ ವಿಧಿಸಿರುವ ಘಟನೆ ವರದಿಯಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು 11 ಜನರನ್ನು ಬಂಧಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಾಯಿರಾ ಸ್ಟೇಷನ್ ಹೌಸ್ ಆಫೀಸರ್ (SHO) ಕನರಾಮ್ ಸೀರ್ವಿ ಅವರು, ‘ಈ ಘಟನೆ ಮೇ 12 ರಂದು ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಒಟ್ಟು 11 ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಡಿಯೋ ಬಹಿರಂಗವಾದ ನಂತರ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತನಿಖೆಯ ನಂತರ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಚ್‌ಒ ಕನರಾಮ್ ಸೀರ್ವಿ ಹೇಳಿದರು ಎಂದು ಈಟಿವಿ ಭಾರತ್ ವರದಿ ಮಾಡಿದೆ.

ಪೊಲೀಸರ ಪ್ರಕಾರ, ಕಮೋಲ್ ಗ್ರಾಮದಲ್ಲಿ ಸಮುದಾಯ ಮಟ್ಟದಲ್ಲಿ ಮದ್ಯ ನಿಷೇಧವನ್ನು ಜಾರಿಗೊಳಿಸಲಾಗಿದೆ. ಆದರೆ ಯುವಕ ಮದ್ಯ ಸೇವಿಸುವ ಮೂಲಕ ನಿಯಮವನ್ನು ಉಲ್ಲಂಘಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮೇ 11 ರಂದು, ಅವನು ಕುಡಿದ ಮತ್ತಿನಲ್ಲಿ ಮನೆಗೆ ಹಿಂತಿರುಗಿ ತನ್ನ ತಂದೆಯನ್ನು ನಿಂದಿಸಿ ಹಲ್ಲೆ ಮಾಡಿದನು. ಮರುದಿನ, ಸಮುದಾಯದ ಹಿರಿಯರು ಸಭೆ ನಡೆಸಿ ಅವನಿಗೆ 11,000 ರೂ. ದಂಡ ವಿಧಿಸಿದರು ಎಂದು ವರದಿಯಾಗಿದೆ.

ಮಂಗಳವಾರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed