Modi On NEET: ‘ಮಕ್ಕಳನ್ನು ಕೆರಳಿಸಬೇಡಿ, ಸರಿಯಾದ ಮಾರ್ಗ ತೋರಿಸಿ’; ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಮಹ್ವತದ ಸಂದೇಶ / Narendra Modi on NEET Row | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

Modi On NEET: ‘ಮಕ್ಕಳನ್ನು ಕೆರಳಿಸಬೇಡಿ, ಸರಿಯಾದ ಮಾರ್ಗ ತೋರಿಸಿ’; ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಮಹ್ವತದ ಸಂದೇಶ / Narendra Modi on NEET Row | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ NDA ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಮಹತ್ವದ ಸಂದೇಶ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಹಾದಿಯಲ್ಲಿ ಮಾರ್ಗದರ್ಶನ ಮಾಡುವಂತೆ ಸಂಸದರನ್ನು ಒತ್ತಾಯಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ (NEET Question Paper Leak) ಸೋರಿಕೆ ವಿವಾದದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (PM Narendra Modi) NDA ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಮಹತ್ವದ ಸಂದೇಶ ನೀಡಿದ್ದಾರೆ. ಮಂಗಲ್ ಮಿಲನ್ ಎಂದು ಕರೆಯಲ್ಪಡುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಮೋದಿ, ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಮಕ್ಕಳನ್ನು ಕೆರಳಿಸಬೇಡಿ ಎಂದು ಕರೆ ಕೊಟ್ಟಿದ್ದಾರೆ.

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಮಹ್ವತದ ಸಂದೇಶ!

ನೀಟ್ ಪತ್ರಿಕೆ ಸೋರಿಕೆಯಿಂದ ಉಂಟಾದ ಗದ್ದಲ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಈ ಮುಖ್ಯ ಸಂದೇಶ ನೀಡಿದ್ದಾರೆ. ಮಂಗಳವಾರ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ (ಮಂಗಲ್ ಮಿಲನ್) ಪ್ರಧಾನಿ ಮೋದಿ ಭಾಗವಹಿಸಿ ಮಾತನಾಡಿದರು.

ನೀಟ್​ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡುವಂತೆ ಎನ್‌ಡಿಎ ಸಂಸದರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು. ‘ತಪ್ಪು ಹಾದಿಯಲ್ಲಿ ಹೋಗುವುದು ಸುಲಭ, ಆದರೆ ಸರಿಯಾದ ಹಾದಿಗೆ ಹಿಂತಿರುಗುವುದು ಕಷ್ಟ. ನಾವು ಅವರನ್ನು ಸರಿಯಾದ ಹಾದಿಗೆ ತರಬೇಕು. ಇದು ನಮ್ಮ ಜವಾಬ್ದಾರಿ’ ಎಂದು ಹೇಳಿದರು. ಯುವಕರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಪ್ರಧಾನಿ ಆತಂಕ ವ್ಯಕ್ತಪಡಿಸಿದರು. ಅವರನ್ನು ಪ್ರಚೋದಿಸಬೇಡಿ, ಸರಿಯಾದ ಮಾರ್ಗ ತೋರಿಸಿ ಎಂದು ಸಂಸದರಿಗೆ ಸಲಹೆ ನೀಡಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.

ಪತ್ರಿಕೆ ಸೋರಿಕೆ ಬಗ್ಗೆ 5 ನಿಮಿಷ ಮಾತು!

ಪ್ರಧಾನಿ ಮೋದಿ ಸಭೆಯಲ್ಲಿ ನೀಟ್ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಸುಮಾರು 5 ನಿಮಿಷಗಳ ಕಾಲ ಮಾತನಾಡಿದರು. ಪತ್ರಿಕೆ ಸೋರಿಕೆ ಮತ್ತೆ ಸಂಭವಿಸಬಾರದು ಎಂದು ಒತ್ತಿ ಹೇಳಿದರು. ಈ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಮರುಪರೀಕ್ಷೆ ಮತ್ತು ಫಲಿತಾಂಶ!

ನೀಟ್ ಪರೀಕ್ಷೆಯನ್ನು ಮರುನಡೆಸುವುದಕ್ಕೆ ಆದ್ಯತೆ ನೀಡಲಾಗಿದೆ. ಫಲಿತಾಂಶಗಳನ್ನು ವಿಳಂಬವಿಲ್ಲದೆ ಘೋಷಿಸಲಾಗುವುದು ಎಂದು ಪ್ರಧಾನಿ ಸಂಸದರಿಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸುವುದು ಸರ್ಕಾರದ ಗುರಿ ಎಂದು ಅವರು ಒತ್ತಿ ಹೇಳಿದರು.ಸ

ಸಭೆಯಲ್ಲಿ ಯಾರು ಭಾಗವಹಿಸಿದ್ದರು?

ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎಲ್ಲಾ ಕೇಂದ್ರ ಸಚಿವರು ಮತ್ತು ಎನ್‌ಡಿಎ ಸಂಸದರು ಭಾಗವಹಿಸಿದ್ದರು. ಸಭೆಯ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು ಪ್ರಧಾನಿಯವರ ಮಾತುಗಳ ಬಗ್ಗೆ ಮಾಹಿತಿ ನೀಡಿದರು.

ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಕ್ಷ’ದ ನೇತೃತ್ವದಲ್ಲಿ ವಿದ್ಯಾರ್ಥಿಗಳು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದರು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ವಿದ್ಯಾರ್ಥಿಗಳ ನಿಯೋಗ ಸಭೆ ನಡೆಸಿದ ನಂತರವೂ ಪ್ರತಿಭಟನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೇಳಿಕೆಯು ಮಹತ್ವ ಪಡೆದಿದೆ.

ಪ್ರಧಾನಿ ಮೋದಿ ಅವರ ಈ ಸಂದೇಶ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವತ್ತ ಸರ್ಕಾರದ ಗಮನವಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವುದು ಮತ್ತು ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಒತ್ತಿ ಹೇಳಿದ್ದಾರೆ. ವಿದ್ಯಾರ್ಥಿಗಳು ಶಾಂತವಾಗಿ ಇರಬೇಕು ಮತ್ತು ಸರ್ಕಾರದ ಕ್ರಮಗಳ ಮೇಲೆ ವಿಶ್ವಾಸವಿಡಬೇಕು ಎಂಬ ಸಂದೇಶವನ್ನೂ ಈ ಸಭೆಯ ಮೂಲಕ ನೀಡಲಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports