Monsoon Rain Alert: ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಉಳಿದ ಜಿಲ್ಲೆಗಳ ಮಳೆ ಮುನ್ಸೂಚನೆ ತಿಳಿಯಿರಿ | Karnataka Rain: Heavy Rainfall Eexpected In Many Districts

Karnataka

oi-Naveen Kumar N

|

Google Oneindia Kannada News

ಜೂನ್‌ನಲ್ಲಿ ಕೈಕೊಟ್ಟಿದ್ದ ಮುಂಗಾರು ಜುಲೈನಲ್ಲಿ ಅಬ್ಬರಿಸಲು ಆರಂಭಿಸಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಗುಡುಗು-ಮಿಂಚು ಸಾಹಿತ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜುಲೈ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಜೂನ್ 5ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರೆ, ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Karnataka Rain

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ನದಿ, ಹೊಳೆಗಳು ಮೈದುಂಬಿಕೊಳ್ಳುತ್ತಿವೆ. ಜಿಲ್ಲೆಯ ಬೈಂದೂರು ತಾಲೂಕಿನ ಕಮಲಶಿಲೆಯಲ್ಲಿ ನದಿಯಲ್ಲಿ ಮುಳುಗಿ ಅರ್ಚಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರೆಡ್ ಅಲರ್ಟ್ ಘೋಷಣೆ ಮಾಡಿದ್ದರೂ ಮಂಗಳೂರು ಹೊರವಲಯದ ಹರೇಕಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೋಟ್ ಮಗುಚಿಕೊಂಡಿದ್ದು ಯುವಕನನ್ನು ರಕ್ಷಣೆ ಮಾಡಲಾಗಿದ್ದ, ದೋಣಿ ಕೊಚ್ಚಿ ಹೋಗಿದೆ. ಹಲವು ಕಡೆಗಳಲ್ಲಿ ರಸ್ತೆಗಳು ಮುಳುಗಡೆಯಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಅಬ್ಬರಿಸುತ್ತಿರುವ ಸಮುದ್ರ, ಮೀನುಗಾರಿಕೆಗೆ ನಿರ್ಬಂಧ

ಭಾರಿ ಮಳೆಯ ಜೊತೆಗೆ ಬಿರುಗಾಳಿ ಬೀಸುತ್ತಿದ್ದು ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿವೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ಪ್ರವಾಸಿಗರು, ಸ್ಥಳೀಯರಿಗು ಕೂಡ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಭಾರಿ ಮಳೆಯ ಕಾರಣ ಹಲವು ಕಡೆಗಳಲ್ಲಿ ಭೂಕುಸಿತ ಕೂಡ ಉಂಟಾಗುತ್ತಿದ್ದು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಉಡುಪಿ; ಭಾರೀ ಮಳೆ, ವಿದ್ಯಾರ್ಥಿಗಳು, ಜನರಿಗೆ ಮುಂಜಾಗೃತಾ ಸೂಚನೆಗಳು ಉಡುಪಿ; ಭಾರೀ ಮಳೆ, ವಿದ್ಯಾರ್ಥಿಗಳು, ಜನರಿಗೆ ಮುಂಜಾಗೃತಾ ಸೂಚನೆಗಳು

ಮಲೆನಾಡು, ಉತ್ತರ ಒಳನಾಡಿನಲ್ಲೂ ಉತ್ತಮ ಮಳೆ

ಮಲೆನಾಡು ಪ್ರದೇಶಗಳಲ್ಲಿ ಕೂಡ ಭಾರಿ ಮಳೆಯಾಗುತ್ತಿದೆ. ಉತ್ತಮ ಮಳೆಯಿಂದಾಗಿ ಶರಾವತಿಯಲ್ಲಿ ನೀರು ಹರಿಯುತ್ತಿದ್ದು ಜೋಗ್ ಫಾಲ್ಸ್‌ಗೆ ಜೀವಕಳೆ ಬಂದಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಕಾರ್ಗಲ್, ತಾಳಗುಪ್ಪ, ಶಿರಸಿ, ಸಿದ್ದಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಉತ್ತರ ಒಳನಾಡಿನಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಲಕಾವೇರಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮೈಸೂರು, ಭಾಗಮಂಡಲ, ಮಡಿಕೇರಿ, ಕೊಡಗು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

English summary

Karanataka Rain : Coastal Karnataka is expected to experience widespread moderate to heavy rainfall, while the Malnad districts are likely to receive widespread rainfall, with isolated to scattered areas experiencing very heavy rainfall.

Story first published: Wednesday, July 5, 2023, 16:29 [IST]

Source link