Last Updated:
‘ಇಂದು ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯದ ಮೈದಾನವು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮತ್ತು ಅಭಿವೃದ್ಧಿಯನ್ನು ಆಚರಿಸುವ ಜನರ ಉಪಸ್ಥಿತಿಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಪ್ರಧಾನಿ ಮೋದಿ, ಅಭಿವೃದ್ಧಿ ಹೊಂದಿದ ಭಾರತದತ್ತ ಪ್ರಯಾಣವನ್ನು ಮತ್ತಷ್ಟು ವೇಗಗೊಳಿಸಲು ತಾವು ಜನರ ನಡುವೆ ಬಂದಿರುವುದಾಗಿ’ ಹೇಳಿದರು.
ವಡೋದರಾ: ಗುಜರಾತ್ನ ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸುಮಾರು ₹35,200 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು.














