Last Updated:
ಪ್ರಧಾನಿ ಮೋದಿ ಅವರು ನೇಪಾಳದ ಪ್ರಧಾನಿ ಬಾಲೆನ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದರು. ಈ ಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ದೃಢವಾಗಿ ನಿಲ್ಲುತ್ತಾರೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಬುಧವಾರ (Nepal Flood) ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಈ ವರೆಗೆ ಸಾವನ್ನಪ್ಪಿದವರ ಸಂಖ್ಯೆ 160ಕ್ಕೆ ಏರಿಕೆ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆ ಪೈಕಿ 157 ಶವಗಳನ್ನು ಹೊರತೆಗೆಯಲಾಗಿದೆ, ಆದರೆ, 750 ಕ್ಕೂ ಹೆಚ್ಚು ಜನರು ಕಾಣೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.














