Last Updated:
ನೇಪಾಳದಲ್ಲಿ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರನ್ನ ಈಗಾಗಲೇ ರಕ್ಷಣೆ ಮಾಡಲಾಗಿದ್ದು, ಇವರು ಕಲಬುರಗಿ ಮೂಲದವರು ಎಂದು ತಿಳಿದು ಬಂದಿದೆ.
ನೇಪಾಳದ (Nepal Flood) ಉತ್ತರ ಭಾಗದಲ್ಲಿ ಮತ್ತು ಟಿಬೆಟ್ ಗಡಿ ಪ್ರದೇಶಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಸಂಭಾವಿಸಿದ್ದು, ಭಾರೀ ಅನಾಹುತ ಸೃಷ್ಟಿಯಾಗಿದೆ. ಈ ಪ್ರವಾಹದಲ್ಲಿ 160ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿ ಆಗಿದೆ. ಇನ್ನು ಕರ್ನಾಟಕದಿಂದ (Karnataka) ಪ್ರವಾಸಕ್ಕೆಂದು ತೆರಳಿದ್ದ ಕನ್ನಡಿಗರು ಕೂಡ ನೇಪಾಳದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಮಾಹಿತಿ ಬಂದಿದ್ದು, ಈಗಾಗಲೇ ಇಬ್ಬರನ್ನ ರಕ್ಷಣೆ ಮಾಡಲಾಗಿದೆ.














