Last Updated:
ಆರಂಭಿಕ ವರದಿಗಳು ಹೆಚ್ಚಿನ ಸಂಖ್ಯೆಯ ಜನರು ಕಾಣೆಯಾಗಿದ್ದಾರೆ ಎಂದು ಸೂಚಿಸಿದ್ದು, ಸುಮಾರು 1,000 ಜನರು ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ, ಆದರೆ ಸ್ಥಳೀಯ ಅಧಿಕಾರಿಗಳು ಇನ್ನೂ ಇಷ್ಟು ದೊಡ್ಡ ಸಂಖ್ಯೆಯನ್ನು ಅಧಿಕೃತವಾಗಿ ದೃಢಪಡಿಸಿಲ್ಲ.
ಕಠ್ಮಂಡು: ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ಸಂಭವಿಸಿದ (Nepal Flood) ಭಾರಿ ಪ್ರವಾಹದಿಂದಾಗಿ ಟಿಬೆಟ್ನ ಗಡಿಯಲ್ಲಿರುವ ಪ್ರದೇಶದಲ್ಲಿನ ಹಳ್ಳಿಗಳು ಕೊಚ್ಚಿಹೋಗಿವೆ, ರಸ್ತೆಗಳು, ಸೇತುವೆಗಳು ಮತ್ತು ವಿದ್ಯುತ್ ಯೋಜನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಸುಮಾರು 1000 ಜನರು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.














