NIA Raid: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ನಿಷೇಧಿತ PFI ಕಾರ್ಯಕರ್ತರ ಮೇಲೆ ದಾಳಿ | Praveen Nettaru Case: NIA Raid On Banned PFI Workers In Kodagu And Dakshina Kannada

Karnataka

oi-Shankrappa Parangi

|

Google Oneindia Kannada News

ಬೆಂಗಳೂರು, ಜೂನ್ 27: ರಾಜ್ಯದಲ್ಲಿ ಕಳೆದ ಜುಲೈನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವು ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ನಿಷೇಧಿತ ಪಿಎಫ್‌ಐ ಸಂಘಟನೆ ಕಾರ್ಯಕರ್ತ ಮೆನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯಲ್ಲಿ ನಿಷೇಧಿತ PFI ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಮಂಗಳವಾರ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಎರಡು ಜಿಲ್ಲೆಗಳ ಸುಮಾರು ಆರು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಿಎಫ್‌ಐ ಕಾರ್ಯಕರ್ತ ಮನೆಗಳಲ್ಲಿ ಕೆಲವು ಮಹತ್ವದ ದಾಖಲೆಗಳನ್ನು ಅವರು ವಶಕ್ಕೆ ಪಡೆದುಕೊಂಡಿದ್ದಾರೆ.

NIA Raid On Banned PFI Workers

ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರು, ನಿಷೇಧಿತ ಸಂಘಟನೆ ಪಿಎಫ್ ಐನಲ್ಲಿ ಭಾಗವಹಿಸಿದ್ದ ಕಾರ್ಯಕರ್ತರನ್ನು ವಿಚಾರಣೆ ನಡೆಸಿದ್ದೇವೆ. ಇನ್ನೂ ಸಹ ಸೋಮವಾರಪೇಟೆ ಕೆಲವು ಮಂದಿಯ ವಿಚಾರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ನೆಟ್ಟಾರು ಹತ್ಯೆ: ಬಿಜೆಪಿ ಬುಡ ಅಲುಗಾಡಿಸಿದ್ದ ಕಾರ್ಯಕರ್ತರು

2022ರ ಜುಲೈ 26ರಂದು ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿತ್ತು. ಈ ಕೊಲೆಯು ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ಅಲ್ಲದೇ ಇದು ಬಿಜೆಪಿ ವಿರುದ್ಧವೇ ಪಕ್ಷದ ಕಾರ್ಯಕರ್ತರು ತಿರುಗಿ ಬೀಳುವಂತೆ ಮಾಡಿತ್ತು.

ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕ; ಸಿದ್ದರಾಮಯ್ಯ ಟ್ವೀಟ್ ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕ; ಸಿದ್ದರಾಮಯ್ಯ ಟ್ವೀಟ್

ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಬುಡಕ್ಕೆ ಪೆಟ್ಟು ಬಿದ್ದಿತ್ತು. ಘಟನೆ ಬಳಿಕ ಬೆಳ್ಳಾರೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಆಗ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸ್ಥಳಕ್ಕೆ ತೆಳಿದ್ದರು. ಇನ್ನೂ ಸುಳ್ಯ ತಾಲೂಕು ಶಾಸಕರೂ ಆಗಿರುವ ಸಚಿವ ಎಸ್. ಅಂಗಾರ ಅವರು ಜೊತೆಯಲ್ಲಿದ್ದರು.

NIA Raid On Banned PFI Workers

ಹಲವೆಡೆ ದಾಳಿ ನಡೆಸಿದ್ದ ಅಧಿಕಾರಿಗಳು

ಈ ಇಬ್ಬರು ನಾಯಕರ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಕಾರನ್ನೇ ಅಲುಗಾಡಿಸಿ ಕೋಪ ಹೊರ ಹಾಕಿದ್ದರು. ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಬಿಜೆಪಿ ಮತ್ತು ಹಿಂದುಪರ ಕಾರ್ಯಕರ್ತರು, ಇಂತಹ ಕೊಲೆಗಳಿಗೆ ನ್ಯಾಯ ದೊರಕಿಸಿಕೊಡಿ ಎಂದು ಒತ್ತಾಯಿಸಿದರು. ಕೇವಲ ಕಠಿಣ ಕ್ರಮ ಎಂದು ಮಾಧ್ಯಮದವರ ಮುಂದೆ ಹೇಳಿ ಜಾರಿಕೊಳ್ಳುತ್ತಿದ್ದ ಬಿಜೆಪಿ ನಡೆಗೆಯನ್ನು ಒಕ್ಕೋರಲಿನಿಂದ ಟೀಕಿಸಿದರು.

ಈ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಬಿಜೆಪಿ ಸರ್ಕಾರ ಎನ್ ಐಎಗೆ ವಹಿಸಿತ್ತು. ಬಳಿಕ ರಾಜ್ಯದ ಹಲವೆಡೆ ದಾಳಿಗಳನ್ನು ನಡೆಸಿದ್ದ NIA ಅಧಿಕಾರಿಗಳು, ಈ ಸಂಘಟನೆಯ ರಾಜಕೀಯ ಪಕ್ಷ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಮನೆ ಮೇಲೂ ದಾಳಿ ನಡೆಸಿ ಶೋಧಿಸಿದ್ದರು. ಅಲ್ಲದೇ ಹಲವರ ವಿರುದ್ದ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಟಿವಿ ನೈನ್ ವರದಿ ಮಾಡಿದೆ.

English summary

Praveen Nettaru Case: NIA raid on banned PFI workers home in Kodagu and Dakshina Kannada on Tuesday.

Story first published: Tuesday, June 27, 2023, 18:09 [IST]

Source link