Last Updated:
ಓಂ ಪ್ರಕಾಶ್ ರಾವ್ ವಿರುದ್ಧ ಭಾಸ್ಕರ್ ಶೆಟ್ಟಿ ಹಣಕಾಸು ಆರೋಪ ಪ್ರಕರಣಕ್ಕೆ ಹೊಸ ತಿರುವು. ಓಂ ಪ್ರಕಾಶ್ ರಾವ್ ಪತ್ನಿ ಡೆನ್ನಿಸಾ ಪ್ರಕಾಶ್, ಭಾಸ್ಕರ್ ಶೆಟ್ಟಿ ವಿರುದ್ಧ ಪ್ರತಿ ದೂರು ನೀಡಿದ್ದಾರೆ.
ಸ್ಯಾಂಡಲ್ವುಡ್ನ ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ವಿರುದ್ಧ ನಟ ಭಾಸ್ಕರ್ ಶೆಟ್ಟಿ (Bhaskar Shetty) ಮಾಡಿದ್ದ ಹಣಕಾಸು ಆರೋಪ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಿನಿಮಾ ನಿರ್ಮಾಣಕ್ಕೆ ಸಹಾಯ ಮಾಡುವುದಾಗಿ ಹೇಳಿ ತಮ್ಮಿಂದ ಹಣ ಪಡೆದು, ವಾಪಸ್ ಕೇಳಿದಾಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಭಾಸ್ಕರ್ ಶೆಟ್ಟಿ ಆರೋಪಿಸಿದ್ದರು. ಈ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಕೂಡಾ ನೀಡಿದ್ದರು. ಇದೀಗ ಓಂ ಪ್ರಕಾಶ್ ರಾವ್ ಪತ್ನಿ ಡೆನ್ನಿಸಾ ಪ್ರಕಾಶ್, ಭಾಸ್ಕರ್ ಶೆಟ್ಟಿ ಮತ್ತು ವಾಸುದೇವ್ ರೆಡ್ಡಿ ವಿರುದ್ಧ ಪ್ರತಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.














