Last Updated:
ರಾಜ್ ಬಿ ಶೆಟ್ಟಿ (Raj B Shetty) ಅಭಿನಯದ ಮೊದಲ ಹಿಂದಿ ಸಿನಿಮಾ ಬಂದರ್ (Bandar) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ.
ರಾಜ್ ಬಿ ಶೆಟ್ಟಿ (Raj B Shetty) ಅಭಿನಯದ ಮೊದಲ ಹಿಂದಿ ಸಿನಿಮಾ ಬಂದರ್ (Bandar) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ಅನುರಾಗ್ ಕಶ್ಯಪ್ (Anurag Kashyap) ನಿರ್ದೇಶನದ ಈ ಸಿನಿಮಾ ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಕಥಾಹಂದರ ಮತ್ತು ನಿರ್ದೇಶಕರ ಹೇಳಿಕೆಗಳಿಂದಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆಗಸ್ಟ್ 28ರಂದು ಜೀ5 ಒಟಿಟಿಯಲ್ಲಿ ಸಿನಿಮಾ ಸ್ಟ್ರೀಮಿಂಗ್ ಆರಂಭವಾಗಲಿದೆ ಎಂಬ ಸುದ್ದಿ ರಾಜ್ ಬಿ ಶೆಟ್ಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.














