Last Updated:
ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೆಲವು ವಾರಗಳ ಬಳಿಕ ಆಲ್ಫಾ ಡಿಜಿಟಲ್ ಪ್ರೇಕ್ಷಕರನ್ನು ತಲುಪುತ್ತಿದೆ. ವರದಿಗಳ ಪ್ರಕಾರ, ಆಗಸ್ಟ್ 28, ಶುಕ್ರವಾರದಿಂದ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ಶಾರ್ವರಿ ವಾಘ್ ಅಭಿನಯದ ಆಲ್ಫಾ ಸಿನಿಮಾ ಇದೀಗ ಒಟಿಟಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಭರ್ಜರಿ ಆಕ್ಷನ್ ದೃಶ್ಯಗಳು, ದೊಡ್ಡ ಬಜೆಟ್ ಮತ್ತು ಸ್ಟಾರ್‌ಗಳ ಕಾಂಬಿನೇಷನ್‌ನಿಂದಾಗಿ ಚಿತ್ರಮಂದಿರಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮಾತ್ರ ನಿರೀಕ್ಷಿತ ಮಟ್ಟದ ಯಶಸ್ಸು ಕಾಣಲಿಲ್ಲ. ಇದೀಗ ಥಿಯೇಟರ್ ಬಿಡುಗಡೆಯ ಬಳಿಕ ಆಲ್ಫಾ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದ್ದು, ಸಿನಿಮಾವನ್ನು ಮಿಸ್ ಮಾಡಿಕೊಂಡವರಿಗೆ ಮನೆಯಲ್ಲೇ ನೋಡುವ ಅವಕಾಶ ಸಿಗಲಿದೆ.














