Last Updated:
ICC Penalty Pakistan: ಪಂದ್ಯವನ್ನು 8 ವಿಕೆಟ್ಗಳಿಂದ ಗೆದ್ದುಕೊಂಡ ಇಂಗ್ಲೆಂಡ್, ಸರಣಿಯಲ್ಲಿ ಪಾಕಿಸ್ತಾನವನ್ನು 0-3 ಅಂತರದಿಂದ ವೈಟ್ವಾಶ್ ಮಾಡಿತು. ಈಗ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನ ತಂಡದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ನವದೆಹಲಿ: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ (ENG vs PAK) ಪಾಕಿಸ್ತಾನ 0-3 ಅಂತರದ ಹೀನಾಯ ಸೋಲು ಅನುಭವಿಸಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಅಂತಿಮ ಟೆಸ್ಟ್ನಲ್ಲಿ ಪಾಕಿಸ್ತಾನ ತಂಡವು ಹೋರಾಟ ನಡೆಸಿತು, ಆದರೆ ಅದು ಗೆಲುವು ಸಾಧಿಸಲು ಸಾಕಾಗಲಿಲ್ಲ.














