Last Updated:
ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ (Paper Leak Cases) ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳು ಮತ್ತು ಅವರ ಕುಟುಂಬ ಸದಸ್ಯರ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆ ಕೋರಿದೆ.














