Last Updated:
ನ್ಯಾಚುರಲ್ ಸ್ಟಾರ್ ನಾನಿ (Natural Star Nani) ಹಾಗೂ ನಿರ್ದೇಶಕ ಶ್ರೀಕಾಂತ್ ಒಡೇಲ (Srikanth Odela) ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಪ್ಯಾರಡೈಸ್ ಇದೀಗ ಬಿಡುಗಡೆಗೂ ಮುನ್ನವೇ ಭಾರಿ ಕುತೂಹಲ ಮೂಡಿಸಿದೆ.
ಟಾಲಿವುಡ್ನ ನ್ಯಾಚುರಲ್ ಸ್ಟಾರ್ ನಾನಿ (Natural Star Nani) ಹಾಗೂ ನಿರ್ದೇಶಕ ಶ್ರೀಕಾಂತ್ ಒಡೇಲ (Srikanth Odela) ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಪ್ಯಾರಡೈಸ್ ಇದೀಗ ಬಿಡುಗಡೆಗೂ ಮುನ್ನವೇ ಭಾರಿ ಕುತೂಹಲ ಮೂಡಿಸಿದೆ. ದಸರಾ (Dasara) ಸಿನಿಮಾದ ಯಶಸ್ವಿ ಜೋಡಿ ಮತ್ತೊಮ್ಮೆ ಒಂದಾಗಿರುವುದರಿಂದ ಈ ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಆದರೆ ಈ ಬಾರಿ ಚಿತ್ರತಂಡ ಕೈಗೊಂಡಿರುವ ಒಂದು ನಿರ್ಧಾರ ಮಾತ್ರ ಎಲ್ಲರ ಗಮನ ಸೆಳೆಯುತ್ತಿದೆ. ಪ್ಯಾರಡೈಸ್ ಸಿನಿಮಾಗೆ ಟ್ರೇಲರ್ ಬಿಡುಗಡೆ ಮಾಡದೇ ನೇರವಾಗಿ ಚಿತ್ರಮಂದಿರಕ್ಕೆ ತರುವ ನಿರ್ಧಾರವನ್ನು ಚಿತ್ರತಂಡ ಮಾಡಿದೆ.














