Last Updated:
ಪವಿತ್ರಾಗೌಡ ಹಾಜರಾತಿಯ ವೇಳೆ ಹೆಡ್ಫೋನ್ ಬಳಕೆಯ ವಿಚಾರವೂ ನ್ಯಾಯಾಲಯದ ಗಮನಕ್ಕೆ ಬಂದಿದೆ. ಇದನ್ನು ಗಮನಿಸಿದ ಜಡ್ಜ್, ಹೆಡ್ಫೋನ್ ಬಳಸಲು ಯಾರು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ನಟ ದರ್ಶನ್ ( Darshan) ಸೇರಿದಂತೆ ಆರೋಪಿಗಳ ಕಾನೂನು ಹೋರಾಟ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ಜೈಲಿನಲ್ಲಿರುವ ಆರೋಪಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರು.














