Last Updated:
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡ ಬೆನ್ನಲ್ಲೇ 59ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಜೈಲಿನಲ್ಲಿರುವ ಆರೋಪಿ ಪವಿತ್ರಾ ಗೌಡಗೆ (Pavitra Gowda) ಮತ್ತೊಂದು ಹಿನ್ನಡೆಯಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡ ಬೆನ್ನಲ್ಲೇ 59ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡಿರುವುದನ್ನು ಪರಿಗಣಿಸುವಂತೆ ಪವಿತ್ರಾ ಗೌಡ ಪರ ವಕೀಲರು ವಾದಿಸಿದ್ದರು. ಆದರೆ ವಾದ-ಪ್ರತಿವಾದಗಳು ಪೂರ್ಣಗೊಂಡ ಬಳಿಕ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆ ಮುಂದುವರಿದಿದ್ದು, ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಕೋರಿ 59ನೇ ಸಿಸಿಹೆಚ್ ನ್ಯಾಯಾಲಯದ ಮೊರೆ ಹೋಗಿದ್ದರು. ಜಾಮೀನು ಅರ್ಜಿಯ ವಿಚಾರಣೆ ವೇಳೆ ಪವಿತ್ರಾ ಪರ ವಕೀಲರು ಹಲವು ಅಂಶಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು.
ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವ ಸಾಧ್ಯತೆ ಕಡಿಮೆ ಇರುವುದರಿಂದ ಜಾಮೀನು ನೀಡಬೇಕು ಎಂಬ ಅಂಶವನ್ನು ಪವಿತ್ರಾ ಗೌಡ ಪರ ವಕೀಲರು ವಾದಿಸಿದ್ದರು ಎಂದು ವರದಿಯಾಗಿದೆ. ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳು ನಡೆದಿದ್ದು, ಅಂತಿಮವಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ.
(ವರದಿ: ಗಂಗಾಧರ ವಗಾಟ, ನ್ಯೂಸ್ 18 ಕನ್ನಡ, ಬೆಂಗಳೂರು)














