PBKS vs RCB: ಆರ್​​​ಸಿಬಿಗೆ ಬಿಗ್ ಶಾಕ್, ಪಾಟೀದಾರ್ ಬದಲು ಜಿತೇಶ್ ನಾಯಕ! ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ | ಕ್ರೀಡಾ ಸುದ್ದಿ | ACTPnews

ಪಿಬಿಕೆಎಸ್ vs ಆರ್​​ಸಿಬಿ


Last Updated:

ಐಪಿಎಲ್ 2026 ರ 61ನೇ ಲೀಗ್ ಪಂದ್ಯವು ಧರ್ಮಶಾಲಾ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಆರಂಭವಾಗಿದೆ. ಪ್ಲೇಆಫ್ ರೇಸ್​​ನಲ್ಲಿ ಪ್ರಾಬಲ್ಯ ಸಾಧಿಸಲು ಉಭಯ ತಂಡಗಳಲ್ಲಿ ಈ ಪಂದ್ಯ ನಿರ್ಣಾಯಕವಾಗಿದೆ.

ಪಿಬಿಕೆಎಸ್ vs ಆರ್​​ಸಿಬಿ
ಪಿಬಿಕೆಎಸ್ vs ಆರ್​​ಸಿಬಿ

ಐಪಿಎಲ್ (IPL) 2026 ರ 61ನೇ ಲೀಗ್ ಪಂದ್ಯವು ಧರ್ಮಶಾಲಾ (Dharamsala) ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯುತ್ತಿದೆ. ಎರಡೂ ತಂಡಗಳು ಪ್ಲೇಆಫ್ (Playoff) ತಲುಪುವ ಸ್ಪರ್ಧೆಯಲ್ಲಿರುವುದರಿಂದ ಈ ಪಂದ್ಯ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಮೊದಲು ಬೌಲಿಂಗ್ ಮಾಡಲು ನಿರ್ಧಾರಿಸಿದ್ದಾರೆ. ಈ ಪಂದ್ಯದಲ್ಲಿ ಆರ್​​ಸಿಬಿ ತಂಡದ ನಿಯಮಿತ ನಾಯಕ (Captain) ರಜತ್ ಪಾಟೀದಾರ್ (Rajat Patidar) ಆಡುತ್ತಿಲ್ಲ. ಅವರ ಬದಲಿಗೆ ಜಿತೇಶ್ ಶರ್ಮಾ (Jitesh Sharma) ತಂಡವನ್ನು ಮುನ್ನಡೆಸುತ್ತಿದ್ದಾರೆ.

ಪಂಜಾಬ್ ಮತ್ತು ಆರ್​​ಸಿಬಿ ಎರಡೂ ತಂಡಗಳ ಪ್ಲೇಯಿಂಗ್ -11 ರಲ್ಲಿ ಕೆಲವು ಬದಲಾವಣೆಗಳಾಗಿವೆ. ಆರ್​ಸಿಬಿ ನಾಯಕ ರಜತ್ ಪಾಟೀದಾರ್ ಗಾಯದ ಕಾರಣದಿಂದಾಗಿ ಈ ಪಂದ್ಯದಲ್ಲಿ ಆಡುತ್ತಿಲ್ಲ. ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರ ಸ್ಥಾನದಲ್ಲಿ ನಾಯಕತ್ವದ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದಾರೆ.

ಪ್ಲೇಆಫ್ ಲೆಕ್ಕಾಚಾರ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ಸ್ಥಿರ ಪ್ರದರ್ಶನವನ್ನು ಕಾಯ್ದುಕೊಂಡಿದೆ. ಆರ್​​ಸಿಬಿ ಆಡಿದ 12 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಗೆದ್ದು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ 12 ಪಂದ್ಯಗಳನ್ನು ಆಡಿದ್ದು, 6 ರಲ್ಲಿ ಗೆಲ್ಲುವ ಮೂಲಕ 13 ಅಂಕಗಳನ್ನು ಹೊಂದಿದೆ.

ಪಂಜಾಬ್- ಆರ್​ಸಿಬಿ ಮುಖಾಮುಖಿ

ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು 37 ಬಾರಿ ಮುಖಾಮುಖಿಯಾಗಿವೆ. ಆರ್‌ಸಿಬಿ 19 ಪಂದ್ಯಗಳನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 18 ಪಂದ್ಯಗಳನ್ನು ಗೆದ್ದಿದೆ. ಕಳೆದ ಮೂರು ಆವೃತ್ತಿಗಳಲ್ಲಿ ಆಡಿದ ಏಳು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಕೇವಲ ಒಂದನ್ನು ಮಾತ್ರ ಗೆದ್ದಿದೆ.

ಉಭಯ ತಂಡಗಳ ಪ್ಲೇಯಿಂಗ್-11

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್-11:  ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್ (ವಿಕೀ), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಉಮರ್ಜಾಯ್, ಹರ್‌ಪ್ರೀತ್ ಬ್ರಾರ್, ಲಾಕಿ ಫರ್ಗುಸನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್-11: ಜಾಕೋಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೀ/ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed