Last Updated:
ಹೈ-ವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್ಸಿಬಿ ಸೋಲಿಸಿತು. ಇದರೊಂದಿಗೆ, ಆರ್ಸಿಬಿ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿತು.
ಐಪಿಎಲ್ (IPL) 2026 ರಲ್ಲಿ ನಡೆದ ಹೈವೋಲ್ಟೇಜ್ (High voltage) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 23 ರನ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇಆಫ್ (Playoff) ತಲುಪಿದ ಮೊದಲ ತಂಡವಾಯಿತು. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡವು ಅಗ್ರ ನಾಲ್ಕರಲ್ಲಿ ಉಳಿಯುವುದು ಕಷ್ಟಕರವಾಗಿದೆ. ಮೊದಲು ಬ್ಯಾಟಿಂಗ್ (Batting) ಮಾಡಿದ ಆರ್ಸಿಬಿ 4 ವಿಕೆಟ್ಗಳ ನಷ್ಟಕ್ಕೆ 222 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಂಜಾಬ್ ಕೇವಲ 199 ರನ್ಗಳನ್ನು ಗಳಿಸಲು ಸಾಧ್ಯವಾಯಿತು.
ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಆರ್ಸಿಬಿಯನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಆರ್ಸಿಬಿ ನಿಗದಿತ ಓವರ್ಗಳಲ್ಲಿ 4 ವಿಕೆಟ್ಗಳ ನಷ್ಟಕ್ಕೆ 222 ರನ್ ಗಳಿಸಿತು.
ಪಂದ್ಯದಲ್ಲಿ ಆರ್ಸಿಬಿ ಬೃಹತ್ ಮೊತ್ತ ಕಲೆ ಹಾಕಲು ವಿರಾಟ್ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಅದ್ಭುತ ಅರ್ಧಶತಕಗಳನ್ನು ಗಳಿಸಿದರು. ಆದರೆ, ಆರ್ಸಿಬಿ ಗೆಲುವಿನಲ್ಲಿ ಈ ಆಟಗಾರ ಪ್ರಮುಖ ಪಾತ್ರವಹಿಸಿದರು. ಈ ಆಟಗಾರ ಬೇರೆ ಯಾರು ಅಲ್ಲ, ವೇಗಿ ಭುವನೇಶ್ವರ್ ಕುಮಾರ್.
ಪಂಜಾಬ್ ಕಿಂಗ್ಸ್ ತಂಡವು ರನ್ ಚೇಸ್ನಲ್ಲಿ ಕಳಪೆ ಆರಂಭವನ್ನು ಪಡೆಯಿತು. 19 ರನ್ ಗಳಿಗೆ ಮೂರು ವಿಕೆಟ್ ಗಳನ್ನು ಕಳೆದುಕೊಂಡಿತು. ಇದಕ್ಕೆ ಮುಖ್ಯ ಕಾರಣ ಆರ್ಸಿಬಿ ವೇಗಿ ಭುವನೇಶ್ವರ್ ಕುಮಾರ್. ಆರಂಭಿಕರಾದ ಪ್ರಿಯಾಂಶ್ ಆರ್ಯ (0 ರನ್) ಮತ್ತು ಪ್ರಭ್ಸಿಮ್ರಾನ್ ಸಿಂಗ್ (2 ರನ್) ಅವರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡಿದರು. ಈ ಮೂಲಕ ಆರ್ಸಿಬಿ ಗೆಲುವಿನ ಹಾದಿಯನ್ನು ಸುಲಭ ಮಾಡಿದರು.
ಪಂಜಾಬ್ ಕಿಂಗ್ಸ್ ತಂಡದ ಆರಂಭಿಕರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಈ ಆವೃತ್ತಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದಾರೆ. ಈ ಮೂಲಕ ಈ ಜೋಡಿ ಪಂಜಾಬ್ ಗೆಲುವಿಗೆ ನೆರವಾಗಿದರು. ಆರ್ಸಿಬಿ ವಿರುದ್ಧದ ಪಂದ್ಯದಲ್ಲೂ ಈ ಜೋಡಿ ಮೇಲೆ ಹೆಚ್ಚಿನ ನಿರೀಕ್ಷೆಯಿತ್ತು. ಆದರೆ, ಈ ಜೋಡಿಯನ್ನು ಪವರ್ ಪ್ಲೇನಲ್ಲೇ ಔಟ್ ಮಾಡುವ ಮೂಲಕ ಭುವನೇಶ್ವರ್ ಕುಮಾರ್ ಆರ್ಸಿಬಿ ಗೆಲುವಿನ ಹೀರೋ ಎನಿಸಿಕೊಂಡರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕು ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು. ಆರ್ಸಿಬಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಜಾಕೋಬ್ ಬೆಥೆಲ್ 11 ರನ್ ಗಳಿಸಿ ಹರ್ಪ್ರೀತ್ ಬ್ರಾರ್ ಎಸೆತದಲ್ಲಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಎರಡನೇ ವಿಕೆಟ್ಗೆ 76 ರನ್ ಸೇರಿಸಿದರು. ದೇವದತ್ 25 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 45 ರನ್ ಗಳಿಸಿ ಔಟಾದರು.
ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ತಮ್ಮ ಐಪಿಎಲ್ ವೃತ್ತಿಜೀವನದ 67ನೇ ಅರ್ಧಶತಕ ಗಳಿಸಿದರು. ಕೊಹ್ಲಿ 37 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್ ಸೇರಿದಂತೆ 58 ರನ್ ಗಳಿಸಿದರು. ಮತ್ತೊಂದೆಡೆ ವೆಂಕಟೇಶ್ ಅಯ್ಯರ್ 40 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ಗಳೊಂದಿಗೆ ಅಜೇಯ 73 ರನ್ ಗಳಿಸಿ ಮಿಂಚಿದರು.













